ಕೃಷ್ಣಾನಗರ (ಪಶ್ಚಿಮ ಬಂಗಾಳ): ಸತತವಾಗಿ ಸಮನ್ಸ್ ಜಾರಿಯಾಗಿದ್ದರೂ ಹಾಗೂ ಹಲವು ಅವಕಾಶಗಳನ್ನು ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಕೃಷ್ಣಾನಗರ ಜಿಲ್ಲಾ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.
ಆಗಸ್ಟ್ 19 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೀಡಲಾಗಿದ್ದ ನಿರ್ದೇಶನವನ್ನು ಮಹುವಾ ಮೊಯಿತ್ರಾ ಪಾಲಿಸಿಲ್ಲ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸಂಸದೆಯ ಸಹಕಾರ ಮತ್ತು ಬದ್ಧತೆಯ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ತಕ್ಷಣದಿಂದಲೇ ಜಾರಿಗೆ ಬರುವಂತೆ ವಾರಂಟ್ ಜಾರಿಗೊಳಿಸಲು ಆದೇಶಿಸಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಆಗಸ್ಟ್ 28 ಕ್ಕೆ ನಿಗದಿಪಡಿಸಿದೆ.
