ಅರವಿಂದ್ ಕೇಜ್ರಿವಾಲ್ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಮುಖಂಡ ಹಾಗೂ ಮುಖ್ಯಮಂತ್ರಿ ಅತಿಶಿ, ವಿಕಾಸಪುರಿಯಲ್ಲಿ ಪಾದಯಾತ್ರೆ ನಡೆಸುತ್ತಿದ್ದ ಕೇಜ್ರಿವಾಲ್ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು.

ಎಎಪಿ ಮತ್ತು ಕೇಜ್ರಿವಾಲ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ತಿಳಿದಿದೆ, ಅದಕ್ಕಾಗಿಯೇ ಪಕ್ಷವು ಇಂತಹ ಕೊಳಕು ರಾಜಕೀಯ ಮಾಡುತ್ತಿದೆ ಮತ್ತು ಅವರನ್ನು ಕೊಲ್ಲಲು ಬಯಸುತ್ತಿದೆ ಎಂದು ಹೇಳಿದರು.

ಎಎಪಿಯ ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸೌರಭ್ ಭಾರದ್ವಾಜ್ ಕೂಡ ಇದೇ ರೀತಿಯ ಆರೋಪ ಮಾಡಿದ್ದಾರೆ. ಆದರೆ, ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಈ ಆರೋಪಗಳನ್ನು ನಿರಾಕರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು