Tuesday, July 29, 2025

ಸತ್ಯ | ನ್ಯಾಯ |ಧರ್ಮ

ಮದ್ಯ ನೀತಿ ಹಗರಣ: ಕೇಜ್ರಿವಾಲ್‌ ಜಾಮೀನಿಗೆ ತಾತ್ಕಾಲಿಕ ತಡೆಯೊಡ್ಡಿದ ದೆಹಲಿ ಹೈಕೋರ್ಟ್

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿನ್ನಡೆ ಅನುಭವಿಸಿದ್ದಾರೆ. ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿರುದ್ಧ ದೆಹಲಿ ಹೈಕೋರ್ಟ್, ಕೆಳ ನ್ಯಾಯಾಲಯದ ಆದೇಶವನ್ನು ವಿಚಾರಣೆಯ ತನಕ ತಡೆಹಿಡಿಯಲಾಗುವುದು ಎಂದು ಹೇಳಿದೆ.

ಅಂದರೆ ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸುವವರೆಗೂ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಬಿಡುಗಡೆಯಾಗುವುದಿಲ್ಲ.

ಅರವಿಂದ್ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ತಕ್ಷಣದ ವಿಚಾರಣೆಗೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಪ್ರಕರಣದ ವಿಚಾರಣೆ ನಡೆಸುವವರೆಗೆ ಕೆಳ ನ್ಯಾಯಾಲಯದ ಆದೇಶ ಜಾರಿಯಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಗುರುವಾರ (ಜೂನ್ 20, 2024) ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೆಳ ನ್ಯಾಯಾಲಯವು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿತ್ತು. ಅದರಂತೆ ಕೇಜ್ರಿವಾಲ್ ಶುಕ್ರವಾರ (ಜೂನ್ 21, 2024) ತಿಹಾರ್ ಜೈಲಿನಿಂದ ಹೊರಬರಬಹುದಿತ್ತು, ಆದರೆ ಈಗ ಹೈಕೋರ್ಟ್ ಅದಕ್ಕೆ ತಡೆಯೊಡ್ಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page