ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರನ್ನು ಭೇಟಿಯಾಗಲು ತಿಹಾರ್ ಜೈಲು ಆಡಳಿತ ಮಂಡಳಿ ಅನುಮತಿ ನೀಡಿದ್ದು, ಇಂದು ಅವರನ್ನು ಭೇಟಿ ಮಾಡುವುದಾಗಿ ಆಪ್ ಸೋಮವಾರ ತಿಳಿಸಿದೆ.
“ಸುನೀತಾ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯನ್ನು ಮಧ್ಯಾಹ್ನ 12.30 ಕ್ಕೆ ಭೇಟಿಯಾಗಲಿದ್ದಾರೆ. ಅವರು ಸಭೆಯಲ್ಲಿ ದೆಹಲಿ ಕ್ಯಾಬಿನೆಟ್ ಸಚಿವೆ ಅತಿಶಿ ಜೊತೆಗಿರುತ್ತಾರೆ” ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ.
ಮುಖ್ಯಮಂತ್ರಿಯನ್ನು ಭೇಟಿಯಾಗಲು ಜೈಲು ಅಧಿಕಾರಿಗಳು ಅವರಿಗೆ ಅನುಮತಿ ನಿರಾಕರಿಸಿದ್ದಾರೆ ಎಂದು ಎಎಪಿ ಭಾನುವಾರ ಹೇಳಿತ್ತು, ಈ ಆರೋಪವನ್ನು ಜೈಲು ಅಧಿಕಾರಿಗಳು ನಿರಾಕರಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲಿದ್ದಾರೆ.