Thursday, April 17, 2025

ಸತ್ಯ | ನ್ಯಾಯ |ಧರ್ಮ

ಕೆಟ್ಟು ನಿಂತಿದ್ದ ಕ್ಯಾಂಟರ್‌ ವಾಹನಕ್ಕೆ ಅಶ್ವಮೇಧ ಬಸ್‌ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ

ಕುದೂರು; ಪಂಚರ್ ಆಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ವಾಹನದ ಹಿಂಬದಿಗೆ ಕೆ.ಎಸ್.ಆರ್.ಟಿಸಿ (ಅಶ್ವಮೇಧ) ಬಸ್ಸೊಂದು ಡಿಕ್ಕಿ ಹೂಡೆದ ಪರಿಣಾಮ ಚಾಲಕ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೂಂಡಿದ್ದಾರೆ. ಈ ಘಟನೆ ಕುದೂರು ಪೂಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶನಿವಾರ ನಡೆದಿದೆ.

ಘಟನೆಯ ವಿವರ; ಚಿಕ್ಕಮಗಳೂರು ಕಡೆಯಿಂದ ಬೆಂಗಳೂರಿಗೆ ಅತಿ ವೇಗದಲ್ಲಿ ಬರುತ್ತಿದ್ದ ಕೆಎಸ್.ಆರ್.ಟಿ.ಸಿ (ಅಶ್ವಮೇಧ) ಬಸ್ ಸೂಲೂರು ಬಳಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ ವಾಹನದ ಹಿಂಭಾಗಕ್ಜೆ ರಭಸವಾಗಿ ಢಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಜೆಸಿಬಿ ಬಳಸಿ ಬಸ್ಸಿನ ನುಜ್ಜುಗುಜ್ಜಾದ ಭಾಗಗಳನ್ಬು ಬೇರ್ಪಡಿಸಿ ಒಳಗೆ ಸಿಲುಕಿದ್ದ ಚಾಲಕನನ್ನು ಹೂರತೆಗೆದಿದ್ದಾರೆ.

ಘಟನೆಯಲ್ಲಿ ಗಾಯಗೂಂಡ ಹಾಸನದ ವಡ್ಡರಹಳ್ಳಿ ಸೋಮಶೇಖರ್. ಹಾಗೂ ಬೆಂಗಳೂರಿನ ಎಂ.ಎಸ್.ಪಾಳ್ಯದ ಶಶಿಕಲಾ ಎಂಬುವರನ್ನು ನೆಲಮಂಗಲ ಆಸ್ಪತ್ರಗೆ ದಾಖಲಿಸಲಾಗಿದೆ ಉಳಿದ ಗಾಯಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಳಳಕ್ಜೆ ಕುದೂರು ಪಿಎಸ್‌ಐ ನವೀನ್ ಹಾಗೂ ಸಿಬ್ಬಂಧಿಗಳು ಭೇಟಿ ನೀಡಿ ಗಾಯಗೂಂಡವರನ್ನು ನೆಲಮಂಗಲ, ಬೆಂಗಳೂರಿಗೆ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ದಾಖಲಿಸದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page