Monday, February 24, 2025

ಸತ್ಯ | ನ್ಯಾಯ |ಧರ್ಮ

ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ದೆಹಲಿ: ಮಾಜಿ ಮುಖ್ಯಮಂತ್ರಿ ಮತ್ತು ಕಲ್ಕಾಜಿ ಶಾಸಕ ಅತಿಶಿ ಅವರನ್ನು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ.

ಆಮ್ ಆದ್ಮಿ ಪಕ್ಷದ ಇತ್ತೀಚೆಗೆ ಆಯ್ಕೆಯಾದ 22 ಶಾಸಕರು ಭಾನುವಾರ ಇಲ್ಲಿ ಸಭೆ ಸೇರಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಸಭೆಯಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಭಾಗವಹಿಸಿದ್ದರು. ದೆಹಲಿಯಲ್ಲಿ ಮಹಿಳೆಯೊಬ್ಬರು ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುವುದು ಇದೇ ಮೊದಲು. ಪಕ್ಷದ ದೆಹಲಿ ಘಟಕದ ಸಂಚಾಲಕ ಗೋಪಾಲ್ ರೈ ಮಾಧ್ಯಮಗೋಷ್ಠಿಯಲ್ಲಿ ಈ ವಿವರಗಳನ್ನು ಬಹಿರಂಗಪಡಿಸಿದರು.

ಸಭೆಯಲ್ಲಿ ಬುರಾರಿ ಶಾಸಕ ಸಂಜೀವ್ ಝಾ ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಇತರ ಎಲ್ಲಾ ಶಾಸಕರು ಅದನ್ನು ಸರ್ವಾನುಮತದಿಂದ ಅನುಮೋದಿಸಿದರು. ಅತಿಶಿ ಅವರು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಶಾಸಕರಿಗೆ ಧನ್ಯವಾದ ಅರ್ಪಿಸಿದರು.

ಅವರು ಪ್ರಬಲ ವಿರೋಧ ಪಕ್ಷದ ಪಾತ್ರವನ್ನು ವಹಿಸಲಿದ್ದಾರೆ. ದೆಹಲಿ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಅತಿಶಿ ಅವರನ್ನು ಅಭಿನಂದಿಸಿದ ಕೇಜ್ರಿವಾಲ್, ‘ಎಕ್ಸ್’ ಮೂಲಕ ದೆಹಲಿ ಜನರ ಅನುಕೂಲಕ್ಕಾಗಿ ಎಎಪಿ ರಚನಾತ್ಮಕ ವಿರೋಧ ಪಕ್ಷದ ಪಾತ್ರವನ್ನು ವಹಿಸುತ್ತಿದೆ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page