ಮಧ್ಯಪ್ರದೇಶದ ಬಿಜೆಪಿ ನಾಯಕ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾಕರ ಸಹೋದರಿ’ ಎಂದ ಬೆನ್ನಲ್ಲೇ ಈಗ ಕರ್ನಾಟಕ ಬಿಜೆಪಿ ನಾಯಕನೊಬ್ಬನ ಅದೇ ಮಾದರಿಯ ಹೇಳಿಕೆ ದೊಡ್ಡ ಸದ್ದು ಮಾಡುತ್ತಿದೆ. ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು ‘ಪಾಕಿಸ್ತಾನದಿಂದ ಬಂದವರು’ ಎಂದು ಕರೆದು ವಿವಾದ ಸೃಷ್ಟಿಸಿದ್ದರು. ಈ ಹೇಳಿಕೆಯನ್ನು ರಾಜ್ಯ ಐಎಎಸ್ ಅಧಿಕಾರಿಗಳ ಸಂಘ ತೀವ್ರವಾಗಿ ಖಂಡಿಸಿದೆ.
ಮೇ 24 ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿರಿಸಿಕೊಂಡು ರಾಜ್ಯ ಬಿಜೆಪಿಯು “ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಆಯೋಜಿಸಲಾಗಿತ್ತು . ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು. ಮಾತು ಮುಂದುವರೆಸುತ್ತಾ “ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೆಯೆ” ಎಂದು ಹೇಳಿದ್ದರು.
ನಂತರ ಹೇಳಿಕೆ ವೈರಲ್ ಆಗುತ್ತಿದ್ದಂತೆ ತನ್ನ ಬೇಜವಾಬ್ದಾರಿ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದೂ ಎಂಎಲ್ಸಿ ರವಿಕುಮಾರ್ ಹೇಳಿಕೆ ನೀಡಿದ್ದಾರೆ. ಆದರೆ ಈ ಹೇಳಿಕೆಯ ವಿರುದ್ದ ರಾಜ್ಯ ಐಎಎಸ್ ಅಧಿಕಾರಿಗಳ ಸಂಘ ತೀವ್ರವಾಗಿ ಖಂಡಿಸಿದೆ. ಅಷ್ಟೇ ಅಲ್ಲದೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮೂಲಕ ರವಿಕುಮಾರ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಮೇ 24ರಂದು ಬಿಜೆಪಿ ಪ್ರತಿಭಟನಾಯಲ್ಲಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರು ಅಬ್ಬರದ ಭಾಷಣ ಮಾಡಿದ್ದರು. ಈ ಸಂಬಂಧ ಖಾಸಗಿ ವ್ಯಕ್ತಿ ನೀಡಿದ ದೂರಿನ ಅನ್ವಯ ನ್.ರವಿಕುಮಾರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಸರ್ಕಾರಿ ಅಧಿಕಾರಿಗಳ ನಿಂದನೆ, ಎಸ್ಸಿ ಸಮುದಾಯ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಪಾಕಿಸ್ತಾನದಿಂದ ಬಂದಿರಬೇಕೆಂದಿದ್ದರು. ಅಲ್ಲದೇ ಎಎಸ್ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಚಂದ್ರಶೇಖರ್ ಅವರಿಗೆ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದರು. ಈ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ.