Sunday, August 10, 2025

ಸತ್ಯ | ನ್ಯಾಯ |ಧರ್ಮ

ಯೂಟ್ಯೂಬರ್‌ಗಳ ಮೇಲೆ ಹಲ್ಲೆ – ಆರು ಮಂದಿಯ ಬಂಧನ

ಬೆಂಗಳೂರು : ಧರ್ಮಸ್ಥಳದಲ್ಲಿ (dharmastala) ಯೂಟ್ಯೂಬರ್ (youtuber) ಮೇಲಿನ ಕೇಸ್ ಗೆ ಸಂಬಂಧಿಸಿದಂತೆ ಮೇಜರ್ ಅಪ್ಡೇಟ್(Update) ದೊರೆತಿದೆ.

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ.ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಪಾಂಗಳದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7ಕೇಸ್ ಗಳು ದಾಖಲಾಗಿವೆ.ಸ್ಥಳದಲ್ಲಿದ್ದ ಪೊಲೀಸರ ದೂರು ಆಧರಿಸಿ 4 ಎಫ್ಐಆರ್ ದಾಖಲಾಗಿದೆ. 3 ಸುಮೋಟೋ ಕೇಸ್ ದಾಖಲಾಗಿದೆ. ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ 50-100 ಜನರ ವಿರುದ್ಧವೂ ಇದೀಗ ಎಫ್ಐಆರ್ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page