ಮೆಟ್ರೋ ನಿಲ್ದಾಣದಲ್ಲಿ ಆತ್ಮ*ತ್ಯೆಗೆ ಯತ್ನ; ಮೆಟ್ರೋ ಸಂಚಾರ ಅಸ್ತವ್ಯಸ್ಥ

ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಗರದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ರೇಷ್ಮೆ ಸಂಸ್ಥೆ ಕಡೆಗೆ ಹೋಗುವ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಸುಮಾರು 1 ಗಂಟೆಗಳ ಕಾಲ ನಾಗಸಂದ್ರದಿಂದ ಯಶವಂತಪುರ ಮಾರ್ಗದ ಸಂಚಾರ ಸ್ಥಗಿತಗೊಂಡಿತ್ತು. ಒಂದು ಗಂಟೆಯ ನಂತರ ಸಂಚಾರ ಪ್ರಾರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಟ್ರಾಕ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ

Related Articles

ಇತ್ತೀಚಿನ ಸುದ್ದಿಗಳು