Sunday, June 23, 2024

ಸತ್ಯ | ನ್ಯಾಯ |ಧರ್ಮ

ಸೌಜನ್ಯ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ : ಪ್ರಮೋದ್ ಮುತಾಲಿಕ್

ಪ್ರಕರಣದ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್

ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಮೇಲ್ನೋಟಕ್ಕೇ ತನಿಖೆಯಲ್ಲಿ ಲೋಪ ಮತ್ತು ವ್ಯವಸ್ಥಿತ ಪಿತೂರಿ ಕಂಡುಬರುತ್ತಿದೆ. ಆ ಮೂಲಕ ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಯತ್ನಗಳು ಈವರೆಗೆ ಸಾಕಷ್ಟು ನಡೆದಿವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 40,000 ಮಹಿಳೆಯರು ಕಾಣೆಯಾಗಿದ್ದು 45,000 ಅಪ್ರಾಪ್ತರು ಗರ್ಭಿಣಿಯಾಗಿದ್ದಾರೆ. ಇದೊಂದು ಭಯಾನಕ ಸ್ಥಿತಿಯಾಗಿದ್ದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸೂಕ್ತ ತನಿಖೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಮೋದ್ ಮುತಾಲಿಕ್ “ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಒಂದರಲ್ಲೇ ಕಳೆದ 11 ವರ್ಷಗಳಲ್ಲಿ 434 ಮಹಿಳೆಯರು ಕಾಣೆಯಾಗಿದ್ದು ಸುಮಾರು 452 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳ ಬಗ್ಗೆ ಲಘುವಾಗಿ ಪರಿಗಣಿಸುವುದು ಯಾವುದೇ ಪಕ್ಷದ ಸರ್ಕಾರಕ್ಕೂ ಒಳ್ಳೆಯದಲ್ಲ” ಎಂದಿದ್ದಾರೆ.

ಸೌಜನ್ಯ ಪ್ರಕರಣದಲ್ಲಿ 11 ವರ್ಷ ಜೈಲು ಶಿಕ್ಷೆ ಅನುಭವಿಸಿದ ಸಂತೋಷ್ ರಾವ್ ನಿರಪರಾಧಿ ಎಂದು ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದಲ್ಲಿ ಅಮಾಯಕ ಸಂತೋಷ್ ನನ್ನು ಅರೆಸ್ಟ್ ಮಾಡಿ, ನಂತರ ಬಿಡುಗಡೆ ಮಾಡಿದ್ದಾರೆ. ನಿರ್ಲಜ್ಜ ಪೊಲೀಸ್ ವ್ಯವಸ್ಥೆ ಇದಕ್ಕೆ ಕಾರಣ. ಪೊಲೀಸರ ಭ್ರಷ್ಟಾಚಾರಕ್ಕೆ ಸಂತೋಷ್‌ ರಾವ್ ಬಲಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಸೌಜನ್ಯ ಪ್ರಕರಣ ಸಂಪೂರ್ಣ ತನಿಖೆಯಾಗಬೇಕು ಎಂದು ಆಗ್ರಹಿಸಿದ ಅವರು, ಈ ಪ್ರಕರಣದಲ್ಲಿ ರಾಜಕಾರಣಿಗಳು, ಪೊಲೀಸರು ಪಾಪಿಷ್ಠರು. ಈ ಎಲ್ಲ ವ್ಯವಸ್ಥೆಗೆ ಪೊಲೀಸರು ಹಾಗೂ ಸರ್ಕಾರವೇ ಕಾರಣ. ಪೊಲೀಸರ ಮನೆ ಹೆಣ್ಣು ಮಕ್ಕಳ ಮೇಲೆ ಏನಾದರೂ ಆದರೆ ಸುಮ್ಮನೆ ಇರ್ತಿರಾ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು