ಗುಜರಾತ್ ನ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು 7 ಮಂದಿಯ ಕೊಲೆ ಪ್ರಕರಣದ ಪ್ರಮುಖ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.
11 ಮಂದಿ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಿದ ಬಗ್ಗೆ ದೇಶಾದ್ಯಂತ ವ್ಯಾಪಕ ವಿರೋಧದ ಬೆನ್ನಲ್ಲೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ.