Wednesday, August 14, 2024

ಸತ್ಯ | ನ್ಯಾಯ |ಧರ್ಮ

ಅನರ್ಹರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಆ.31 ಕೊನೆಯ ದಿನ: ತಪ್ಪಿದರೆ ಕ್ರಿಮಿನಲ್ ಮೊಕದ್ದಮೆ

ಧಾರವಾಡ: ಮಾರ್ಚ 25, 2017 ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ, ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಲು ಅರ್ಹತೆಯನ್ನು ಹೊಂದಿಲ್ಲ ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಧಾರವಾಡ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರದ ಆದೇಶದನ್ವಯ ಕೆಲ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯದ ಅಧಿಕಾರಿ, ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗೆ ಕೆಳಗಿರುವ ಪಡಿತರ ಚೀಟಿಯನ್ನು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಪಡೆದುಕೊಂಡಿದ್ದಲ್ಲಿ ತಕ್ಷಣ ಅದನ್ನು ಆಹಾರ ಇಲಾಖೆಗೆ ಹಿಂದಿರುಗಿಸುಬೇಕು ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಈಗಾಗಲೇ ಆದೇಶ ಹೊರಡಿಸಿದ್ದಾರೆ.

ಅಧಿಕಾರಿ, ನೌಕರರು ವಿಳಂಬ ಮಾಡದೇ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚಿಸಲಾಗಿದೆ. ಈ ಹಿಂದೆ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ನಂತರದಲ್ಲಿ ಸರ್ಕಾರಿ ಸೇವೆಗೆ ಸೇರಿದ್ದ ನೌಕರರು ಕೂಡಾ ಬಿಪಿಎಲ್ ಪಡಿತರ ಚೀಟಿಯನ್ನು ಅಗಸ್ಟ 31, 2024 ರೊಳಗಾಗಿ ಸ್ವಯಂ ಪ್ರೇರಣೆಯಿಂದ ಆಯಾ ತಾಲೂಕಿನ ತಹಶೀಲದಾರ ಕಚೇರಿಯಲ್ಲಿ ಹಾಗೂ ಆಹಾರ ಇಲಾಖೆಯ ಹುಬ್ಬಳ್ಳಿ, ಧಾರವಾಡ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು ಎಂದು ಆವರು ಆದೇಶಿಸಿದ್ದಾರೆ.

ಸರ್ಕಾರವು ನೀಡಿರುವ ಆಗಸ್ಟ್ 31, 2024 ರ ಕಾಲಾವಕಾಶದಲ್ಲಿ ಅನರ್ಹರು ಪಡೆದ ಬಿಪಿಎಲ್ ಕಾರ್ಡಗಳನ್ನು ಸ್ವಯಂ ಪ್ರೇರಣೆಯಿಂದ ಸರಕಾರಕ್ಕೆ ಮರಳಿಸದೇ ಇದ್ದಲ್ಲಿ, ಅಂತಹ ಅನರ್ಹರನ್ನು ಸರ್ಕಾರವೇ ಪತ್ತೆ ಮಾಡಿ, ಯಾವಾಗಿನಿಂದ ಎಷ್ಟು ಪ್ರಮಾಣದ ಆಹಾರಧಾನ್ಯವನ್ನು ಪಡೆದಿದ್ದಾರೆ ಎಂಬುದನ್ನು ಲೆಕ್ಕಮಾಡಿ ಮುಕ್ತ ಮಾರುಕಟ್ಟೆ ದರದಂತೆ ದಂಡ ವಸೂಲಿ ಮಾಡುವುದರ ಜೊತೆಗೆ ಅಂತಹವರ ವಿರುದ್ಧ ಕರ್ನಾಟಕ ಪ್ರೆವೆಂಟೆಶನ್ ಆಫ್ ಅನ್‍ಅಥರೈಜಡ್ ಪೊಜಿಶನ್ ಆಫ್ ರೇಷನ್ ಕಾರ್ಡ ಹೊರ್ಡರ್ಸ್-1977ರ (Karnataka Prevention of Unauthorised Possession of Ration Cards Order-1977) ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page