Home ಅಪರಾಧ ಅಯೋಧ್ಯೆ ದೇಣಿಗೆ ಕಳ್ಳತನ ಕೇಸ್, ಎಸ್‌ಐಟಿ ಪುನರ್​​​​​ ರಚಸಿ – ಸುಪ್ರೀಂ ಕೋರ್ಟ್ ಸೂಚನೆ

ಅಯೋಧ್ಯೆ ದೇಣಿಗೆ ಕಳ್ಳತನ ಕೇಸ್, ಎಸ್‌ಐಟಿ ಪುನರ್​​​​​ ರಚಸಿ – ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಅಯೋಧ್ಯೆಯ ರಾಮ ಮಂದಿರಕ್ಕೆ (Ram Mandir) ಸಂಬಂಧಿಸಿದ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (Breaking) ಮರುರಚಿಸುವಂತೆ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಸಲಹೆ ನೀಡಿದೆ. ಇದೇ ವೇಳೆ, ಅತ್ಯಂತ ಸೂಕ್ಷ್ಮವಾಗಿರುವ ಈ ವಿಷಯವನ್ನು ರಾಜಕೀಯಗೊಳಿಸದಂತೆ ಸರ್ವೋಚ್ಚ ನ್ಯಾಯಾಲಯವು ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದೆ. ತನಿಖೆಯು ಯಾವುದೇ ರಾಜಕೀಯ ಪ್ರಭಾವವಿಲ್ಲದೆ, ಅತ್ಯಂತ ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು ಎಂಬುದನ್ನು ನ್ಯಾಯಾಲಯ ಈ ಸಂದರ್ಭದಲ್ಲಿ ಒತ್ತಿಹೇಳಿದೆ.

ಸುಪ್ರೀಂಗೆ ಎಸ್‌ಐಟಿ ವರದಿ ಸಲ್ಲಿಕೆ

ನವದೆಹಲಿ: ಅಯೋಧ್ಯೆಯ(Ayodhya) ಶ್ರೀರಾಮ ಮಂದಿರದ(Ram Mandir) ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ(Uttar Pradesh) ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ತನ್ನ ತನಿಖೆಯ ಪ್ರಗತಿ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಎಸ್‌ಐಟಿ ಈ ಸ್ಟೇಟಸ್ ರಿಪೋರ್ಟ್ ಅನ್ನು ಸೀಲ್ಡ್ ಕವರ್‌ನಲ್ಲಿ ಹಸ್ತಾಂತರಿಸಿದೆ. ಸುಪ್ರೀಂ ಕೋರ್ಟ್ ಇಂದು (ಸೋಮವಾರ) ಈ ಪ್ರಕರಣದ ವಿಚಾರಣೆ ನಡೆಸಲಿದ್ದು, ಇಡೀ ದೇಶದ ಕಣ್ಣು ನ್ಯಾಯಾಲಯದ ಮೇಲಿದೆ.

ಸಿಸಿಟಿವಿಯಲ್ಲಿ ಸೆರೆಯಾಯ್ತು 70ಕ್ಕೂ ಹೆಚ್ಚು ಕಳ್ಳತನದ ದೃಶ್ಯಗಳು!
ಎಸ್‌ಐಟಿ ತನ್ನ ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶಗಳನ್ನು ಬಿಚ್ಚಿಟ್ಟಿದೆ. 2026ರ ಏಪ್ರಿಲ್ 27 ರಿಂದ ಜೂನ್ 5ರ ನಡುವಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಸುಮಾರು 70ಕ್ಕೂ ಹೆಚ್ಚು ಅನುಮಾನಾಸ್ಪದ ಘಟನೆಗಳು ನಡೆದಿರುವುದು ಬೆಳಕಿಗೆ ಬಂದಿದೆ. ದೇಣಿಗೆ ಹಣವನ್ನು ಎಣಿಸುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಯೇ ಕಂತೆ ಕಂತೆ ನೋಟುಗಳನ್ನು ಯಾರಿಗೂ ತಿಳಿಯದಂತೆ ಬಚ್ಚಿಟ್ಟುಕೊಳ್ಳುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಣ ಎಣಿಕೆ ಕೇಂದ್ರದಲ್ಲಿ ಸೂಕ್ತ ತಪಾಸಣೆ ಇಲ್ಲದಿರುವುದು ಮತ್ತು ಭದ್ರತಾ ಲೋಪಗಳೇ ಈ ಕಳ್ಳತನಕ್ಕೆ ಪ್ರಮುಖ ಕಾರಣ ಎಂದು ವರದಿ ಹೇಳಿದೆ.

ಲಕ್ಷಾಂತರ ರೂಪಾಯಿ ನಗದು ಪತ್ತೆ, ಗಟ್ಟಿಗಳ ಕಳ್ಳತನ ಸುಳ್ಳು
ದೇಣಿಗೆ ಎಣಿಕೆ ಕೇಂದ್ರದಲ್ಲಿದ್ದ ಸಿಬ್ಬಂದಿಯಿಂದ ತನಿಖೆ ಆರಂಭವಾಗುವ ಮುನ್ನವೇ ಸುಮಾರು 78.94 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದಲ್ಲದೆ, ಜೂನ್ 4 ರಂದು ಹಣ ಎಣಿಕೆ ಕೊಠಡಿಗೆ ಹೊಂದಿಕೊಂಡಿದ್ದ ಶೌಚಾಲಯದಲ್ಲಿ ಹೆಚ್ಚುವರಿಯಾಗಿ 2.25 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ ಎಂದು ಎಸ್‌ಐಟಿ ತಿಳಿಸಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಬೆಳ್ಳಿ ಇಟ್ಟಿಗೆಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿವೆ ಎಂಬ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ತನಿಖಾ ತಂಡ ಸ್ಪಷ್ಟಪಡಿಸಿದೆ.

ಬಂಧಿತ ಮುಖ್ಯ ಆರೋಪಿಯಿಂದ ಆಸ್ತಿಪಾಸ್ತಿ ಜಪ್ತಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ. ತನಿಖೆಯ ವೇಳೆ ಮುಖ್ಯ ಆರೋಪಿ ರಾಮ್ ಶಂಕರ್ ಯಾದವ್ ಅಲಿಯಾಸ್ ತಿನ್ನು ಎಂಬಾತನನ್ನು 39 ಗಂಟೆಗಳ ಕಾಲ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈತ ನೀಡಿದ ಮಹತ್ವದ ಸುಳಿವುಗಳ ಆಧಾರದ ಮೇಲೆ ತಡರಾತ್ರಿ ನಡೆಸಿದ ದಾಳಿಯಲ್ಲಿ ಒಂದು ಕಾರು, ಬೈಕ್, ಚಿನ್ನದ ಆಭರಣಗಳು, ನಗದು ಮತ್ತು ಪ್ರಮುಖ ಹಣಕಾಸು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಸ್ತುತ ಬ್ಯಾಂಕ್ ಖಾತೆಗಳು ಹಾಗೂ ಹಣ ಎಲ್ಲೆಲ್ಲಿಗೆ ವರ್ಗಾವಣೆಯಾಗಿದೆ ಎಂಬ ಸಂಪೂರ್ಣ ಹಣದ ಹರಿವನ್ನು (ಮನಿ ಟ್ರೇಲ್) ಅಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಹಗರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆಸ್ತಿ ಪಾಸ್ತಿಗಳ ವಶ ಮತ್ತು ದೊಡ್ಡ ಮಟ್ಟದ ಸತ್ಯಾಸತ್ಯತೆಗಳು ಹೊರಬರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

You cannot copy content of this page

Exit mobile version