Tuesday, February 18, 2025

ಸತ್ಯ | ನ್ಯಾಯ |ಧರ್ಮ

ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ಅಭಿಯಾನಕ್ಕೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 18: ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.

ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮ

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಕೆ.ಎನ್.ರಾಜಣ್ಣರವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ನಡೆಯುತ್ತಿರುವ ವಾದದ ಕುರಿತು ಪ್ರತಿಕ್ರಿಯೆ ನೀಡಿ, ರಾಜಣ್ಣ ಹಾಗೂ ಡಿಸಿಎಂ ರವರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.

ದಲಿತ ಮುಖಂಡರೊಂದಿಗೆ ಸಭೆ

ದಲಿತ ಮುಖಂಡರೊದಂದಿಗಿನ ಬಜೆಟ್ ಪೂರ್ವ ಸಭೆಯ ಬಗ್ಗೆ ಉತ್ತರಿಸಿ, ಇಂದು ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ವಿಧಾನಪರಿಷತ್ತಿನ ಸದಸ್ಯರ ನಾಮನಿರ್ದೇಶನ ಕುರಿತು ಚರ್ಚೆಯನ್ನು ತನ್ನ ಅನಾರೋಗ್ಯದ ನಿಮಿತ್ತ ನಡೆಸಲು ಸಾಧ್ಯವಾಗಿಲ್ಲವೆಂದು, ಮುಂದೆ ಈ ಕುರಿತು ನವದೆಹಲಿಗೆ ಹೋಗುವ ಸಾಧ್ಯತೆಯಿದೆಯೆಂದು ಮುಖ್ಯಮಂತ್ರಿಗಳು ತಿಳಿಸಿದರು.
[4:55 pm, 18/2/2025] +91 94481 42741: 👇ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page