Tuesday, December 24, 2024

ಸತ್ಯ | ನ್ಯಾಯ |ಧರ್ಮ

ಕೇಂದ್ರ ಗೃಹ ಸಚಿವರನ್ನ ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ಬಿ.ಎಸ್.ಪಿ. ಪ್ರತಿಭಟನೆ

ಹಾಸನ : ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಡಿಸಿ ಕಛೇರಿ ಮುಂದೆ ಬಹುಜನ ಸಮಾಜ ಪಾರ್ಟಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಮಾಧ್ಯಮದೊಂದಿಗೆ ಮಾತನಾಡಿ, ಕಳೆದ ಸಂಸತ್‌ ಅಧಿವೇಶನದಲ್ಲಿ ಭಾರತ ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸಂವಿಧಾನದ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವಾಗ, ಕೇಂದ್ರ ಗೃಹ ಸಚಿವಅಮಿತ್ ಶಾ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲುದೇವರನ್ನು ಸ್ಮರಿಸಿದ್ದರೆ ಏಳೇಳು ಜನ್ಮಗಳ ಸ್ವರ್ಗ ದೊರೆಯುತ್ತಿತ್ತುಎಂದು ಬೇಜವಾಬ್ದಾರಿತನದಿಂದ ಮಾತನಾಡುವ ಮೂಲಕ ಸಂವಿಧಾನ ಶಿಲ್ಪಿ ಭಾರತರತ್ನ ಬಾಬಾ ಸಾಹೇಬ್‌ ಅಂಬೇಡ್ಕರ್‌ಅವರಿಗೆ ಅವಮಾನ ಮಾಡಿರುತ್ತಾರೆ. ಇದು ಪರಮಪೂಜ್ಯ ಬಾಬಾ ಸಾಹೇಬ್‌ಅಂಬೇಡ್ಕರ್ ಮತ್ತುಅವರು ರಚಿಸಿದ ಸಂವಿಧಾನದ ಮೇಲಿರುವಅಸಹನೆಯ ಪ್ರತೀಕವಾಗಿದೆ ಎಂದರು.
ಸಾವಿರಾರು ವರ್ಷಗಳಿಂದ ಜಾತಿಆಧಾರದ ಮೇಲೆ ಈ ದೇಶದ ಬಹು ಸಂಖ್ಯಾತರಾದ ಎಸ್ಸಿ,ಎಸ್ಟಿ, ಒಬಿಸಿ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ವಿದ್ಯೆ, ಆಸ್ತಿ, ಅಧಿಕಾರಗಳನ್ನು ನಿರಾಕರಿಸಿಕೊಂಡು ಬಂದ ಮನುವಾದಿ ಮೇಲ್ಮಾತಿಗೆ ಸೇರಿದಅಮಿತ್ ಷಾ ಮತ್ತುಅವರ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನವರಿಗೆ ಸ್ವಾತಂತ್ರ ಸಮಾನತೆಯ ಆಶಯಗಳನ್ನು ಎಂದೂಕೂಡ ಒಪ್ಪಿಕೊಳ್ಳಲು ಹಾಗೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಆ ಕಾರಣಕ್ಕಾಗಿ ಅವಕಾಶ ಸಿಕ್ಕಿದಾಗಲೆಲ್ಲ ಬಾಬಾ ಸಾಹೇಬ್‌ ಅಂಬೇಡ್ಕರ್ ಸಂವಿಧಾನ, ಮೀಸಲಾತಿಯನ್ನುಕುರಿತು ಕೇವಲವಾಗಿ, ಅವಹೇಳನಕಾರಿಯಾಗಿ ಮಾತನಾಡುವುದುರೂಢಿಗತವಾಗಿ ಬಂದಿದೆ. ಇಂಥ ಮನುವಾದಿ ಮತ್ತುಜಾತಿವಾದಿ ವ್ಯಕ್ತಿಗಳು ಸಂವಿಧಾನದ ಆಧಾರದ ಮೇಲೆ ರಚನೆಯಾಗಿರುವ ಸರ್ಕಾರದಲ್ಲಿ ಮಂತ್ರಿಯಾಗಿ ಮುಂದುವರಿಯಲುಯಾವುದೇ ನೈತಿಕತೆಇಲ್ಲ.ಆದ್ದರಿಂದ ಬಾಬಾ ಸಾಹೇಬ್‌ ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಮನಸ್ಥಿತಿ ಇರುವಕೇಂದ್ರ ಗೃಹ ಸಚಿವಅಮಿತ್ ಷಾರನ್ನುತಕ್ಷಣ ವಜಾ ಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಹುಜನ ಸಮಾಜ ಪಾರ್ಟಿ ಆಗ್ರಹಿಸುತ್ತದೆಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪಾರ್ಟಿಯಜಿಲ್ಲಾಉಸ್ತುವಾರಿ ಹೆಚ್.ಬಿ. ಮಲ್ಲಯ್ಯ, ಜಿಲ್ಲಾ ಸಂಯೋಜಕಎA.ಜಿ. ಕಿರಣ್, ಸಿ.ಜಿ. ಸೋಮಶೇಖರ್, ಜಿಲ್ಲಾಧ್ಯಕ್ಷ ಲಕ್ಷ÷್ಮಣ್‌ಕೀರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ. ಸುರೇಂದ್ರ, ಜಿಲ್ಲಾಉಪಾಧ್ಯಕ್ಷ ಶಾಕೀರ್‌ಅಹಮದ್, ಜಿಲ್ಲಾ ಸಮಿತಿ ಸದಸ್ಯಜಯವರ್ಧನ್, ಜಿಲ್ಲಾ ಕಾರ್ಯದರ್ಶಿ ಪುಟ್ಟರಾಜು, ರಾಜುಇತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page