Saturday, April 12, 2025

ಸತ್ಯ | ನ್ಯಾಯ |ಧರ್ಮ

ಕಾರ್ಯಕರ್ತರು ಬಡಿಗೆ ಹಿಡಿದು ಠಾಣೆಗೆ ನುಗ್ಗುವ ದಿನ ದೂರವಿಲ್ಲ: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜ್ಯದ ಪೊಲೀಸ್‌ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಮಿತಿಮೀರಿದ್ದು, ಕಾರ್ಯಕರ್ತರು ಬಡಿಗೆ ಹಿಡಿದು ಠಾಣೆಗೆ ನುಗ್ಗುವ ದಿನ ದೂರವಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆದರಿಕೆ ಒಡ್ಡಿದ್ದಾರೆ.

ಯಲ್ಲಾಪುರದ ವೈಟಿಎಸ್‌ಎಸ್ ಮೈದಾನದಲ್ಲಿ ಶುಕ್ರವಾರ ನಡೆದ ಜನಾಕ್ರೋಶ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು ಸರ್ಕಾರದ ನಡೆ ಟೀಕಿಸುವವರು, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುವವರ ವಿರುದ್ಧ ಪ್ರಕರಣ ದಾಖಲಿಸಿ ಬೆದರಿಸುವ ಕೆಲಸ ನಡೆದಿದೆ ಎಂದು ಆರೋಪಿಸಿದರು.

ಆದರೆ ಬೆದರಿಕೆಗೆ ನಮ್ಮ ಕಾರ್ಯಕರ್ತರು ಹೆದರುವುದಿಲ್ಲ. ಅವರ ಸಹನೆ ಮಿತಿಮೀರಲು ಅವಕಾಶ ನೀಡದಿರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪೊಲೀಸ್ ಸಿಬ್ಬಂದಿಗೆ ಮಾಸಿಕ ವೇತನ ನೀಡಲು ವಿಳಂಬ ಆಗುತ್ತಿದೆ ಎಂಬುದನ್ನು ಪೊಲೀಸ್ ಅಧಿಕಾರಿಗಳು ನೆನಪಿನಲ್ಲಿಡಿ ಎಂದು ಹೇಳಿದರು.

ಮುಖ್ಯಮಂತ್ರಿ ಕುರ್ಚಿ ಅಲ್ಲಾಡಿದಾಗ, ರಾಜ್ಯದಲ್ಲಿ ಬೆಲೆ ಏರಿಕೆ ವಿಚಾರ, ಸರ್ಕಾರದ ದುರಾಡಳಿತ ಚರ್ಚೆಯಾದಾಗಲೆಲ್ಲ, ಜಾತಿ ಜನಗಣತಿ ವರದಿ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನೆಲೆಗೆ ತರುತ್ತಾರೆ. ಇದು ಅವರ ಪಾಲಿಗೆ ಬೆದರು ಗೊಂಬೆಯಂತಾಗಿದೆ ಎಂದು ಈ ಸಂಧರ್ಭದಲ್ಲಿ ಅವರು ಸರ್ಕಾರವನ್ನು ಟೀಕಿಸಿದರು.

ಜೊತೆಗೆ ತಮ್ಮದೇ ಪಕ್ಷದ ಶಾಸಕ ಅವರದೇ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಭಟನೆಗೆ ಗೈರಾಗಿದ್ದು ಪಕ್ಷದ ಮುಜುಗರಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಿಟ್ಟಾದ ವಿಜಯೇಂದ್ರ ಪಕ್ಷದ ಸಾಮಾನ್ಯ ಕಾರ್ಯಕರ್ತನೊಬ್ಬನನ್ನು ಯಲ್ಲಾಪುರದಲ್ಲಿ ನಿಲ್ಲಿಸಿ ಗೆಲ್ಲಿಸಿ ತೋರಿಸುತ್ತೇನೆ ಎಂದು ಶಿವರಾಂ ಹೆಬ್ಬಾರ್‌ ಅವರಿಗೆ ಪರೋಕ್ಷ ಸವಾಲ್‌ ಹಾಕಿದರು.

https://x.com/BYVijayendra/status/1910518618128859258

Related Articles

ಇತ್ತೀಚಿನ ಸುದ್ದಿಗಳು

You cannot copy content of this page