Friday, December 13, 2024

ಸತ್ಯ | ನ್ಯಾಯ |ಧರ್ಮ

ದರ್ಶನ್​​, ಪವಿತ್ರಾ ಗೌಡ​ ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ದರ್ಶನ್​​, ಪವಿತ್ರಾ ಗೌಡ​ ಸೇರಿದಂತೆ ಒಟ್ಟು 7 ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಮಾರು 130 ದಿನಗಳ ಜೈಲು ವಾಸದ ನಂತರ ಈಗ ಎಲ್ಲಾ 7 ಮಂದಿ ಜಾಮೀನಿನ ಮೇಲೆ ಹೊರ ಬರಲಿದ್ದಾರೆ.

ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೂ ಈಗ ಜಾಮೀನು ಮಂಜೂರಿ ಮಾಡಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು. ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು.

ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ

Related Articles

ಇತ್ತೀಚಿನ ಸುದ್ದಿಗಳು

You cannot copy content of this page