ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ನಕಲಿ ದಾಖಲೆಗಳ ಮೂಲಕ ಹಲವಾರು ಕೋಟಿ ರೂಪಾಯಿ ಮೌಲ್ಯದ ದೊಡ್ಡ ಪ್ರಮಾಣದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ದಾಖಲೆಗಳನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಜಾರಿ ನಿರ್ದೇಶನಾಲಯ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಸೊರೆನ್ ಅವರನ್ನು ಜನವರಿ 31 ರಂದು ಬಂಧಿಸಿತ್ತು.
ಈ ಹಿನ್ನೆಲೆಯಲ್ಲಿ ರಾಂಚಿಯ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿನಲ್ಲಿ ಕಳೆದ 6 ತಿಂಗಳಿನಿಂದ ಇದ್ದ ಮಾಜಿ ಮುಖ್ಯಮಂತ್ರಿ ಹೇಮಂತ್ ಸೂರೇನ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ತನಿಖೆಯ ಭಾಗವಾಗಿ ಸೋರೆನ್, ಐಎಎಸ್ ಅಧಿಕಾರಿ ಮತ್ತು ರಾಂಚಿಯ ಮಾಜಿ ಜಿಲ್ಲಾಧಿಕಾರಿ ಛವಿ ರಂಜನ್, ಭಾನು ಪ್ರತಾಪ್ ಪ್ರಸಾದ್ ಸೇರಿದಂತೆ 25 ಕ್ಕೂ ಹೆಚ್ಚು ಜನರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು.
ಬಂಧನದ ಸಮಯದಲ್ಲಿ, ಸೋರೆನ್ ತನ್ನ ವಿರುದ್ಧದ ಭೂ ಕಬಳಿಕೆ ಆರೋಪವನ್ನು ಬಲವಾಗಿ ನಿರಾಕರಿಸಿದ್ದರು. ದೇಶದಾದ್ಯಂತ ಆಡಳಿತಾರೂಢ ಬಿಜೆಪಿ ಸರ್ಕಾರ ರಾಜಕೀಯ ಸೇಡಿನ ಭಾಗವಾಗಿ ಎಲ್ಲಾ ವಿರೋಧಿ ನಾಯಕರ ಮೇಲೂ ಸರ್ಕಾರಿ ಸಂಸ್ಥೆ ಸಿಬಿಐ, ಐಟಿ, ಇಡಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದ ಬಿಜೆಪಿ ಇಲ್ಲೂ ಸಹ ರಾಜಕೀಯ ಸೇಡಿನ ಭಾಗ ಎಂದೇ ಸೂರೇನ್ ಬಣ್ಣಿಸಿದ್ದರು.
ಸೊರೆನ್ ಮತ್ತಿತರ 11 ಆರೋಪಿಗಳನ್ನು ರಾಂಚಿಯ ವಿಶೇಷ ನ್ಯಾಯಾಲಯಕ್ಕೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ, ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಿತ್ತು. ಆದರೆ, ಈ ತೀರ್ಪನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.