Tuesday, February 17, 2026

ಸತ್ಯ | ನ್ಯಾಯ |ಧರ್ಮ

ಬಾಲಕಿ ಮೇಲೆ ಗುಂಡು ಹಾರಿಸಿ ಕೊಲ್ಲಲು ಪ್ರಯತ್ನಿಸಿದ ಪ್ರಮುಖ ಆರೋಪಿ ಬಂಧನ

ನವದೆಹಲಿ: ದಕ್ಷಿಣ ದೆಹಲಿಯ ಸಂಗಮ್ ವಿಹಾರ್‌ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಆರೋಪಿ ಅಮಾನತ್ ಅಲಿಯನ್ನು, ದೆಹಲಿ ಪೊಲೀಸರು ಬಂಧಿಸಿದ್ದಾರೆಂದು ಸುದ್ದಿ-ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಡಿಸಿಪಿ ಬೆನಿಟಾ ಮೇರಿ ಜೈಕರ್, ಆಗಸ್ಟ್‌ 25 ರಂದು ಬಾಲಕಿಯ ಮೇಲೆ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಆರೋಪಿಯ ಇಬ್ಬರು ಸಹಚರರನ್ನು ಕಳೆದ ವಾರ ಬಂಧಿಸಲಾಗಿತ್ತು, ಇಂದು ಪ್ರಮುಖ ಆರೋಪಿ ಅಮಾನತ್ ಅಲಿಯನ್ನು ಬಂಧಿಸುವುದರಲ್ಲಿ ದಕ್ಷಿಣ ಜಿಲ್ಲಾ ಪೊಲೀಸ್ ತಂಡವು ಯಶಸ್ವಿಯಾಗಿದೆ ಎಂದು ಹೇಳಿದರು .

Related Articles

ಇತ್ತೀಚಿನ ಸುದ್ದಿಗಳು

You cannot copy content of this page