Friday, June 14, 2024

ಸತ್ಯ | ನ್ಯಾಯ |ಧರ್ಮ

ಬೆಂಗಳೂರು: ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ರೈಲಿಗೆ ಚಾಲನೆ ನೀಡಿದ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ನಗರದ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ (ಕೆಎಸ್‌ಅರ್‌) ರೈಲು ನಿಲ್ದಾಣದಲ್ಲಿ ಭಾರತದ 5ನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ಬಾವುಟ ತೋರಿಸುವುದರ ಮೂಲಕ ಚಾನಲೆ ನೀಡಿದರು.

ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆತ್ಮೀಯವಾಗಿ ಸ್ವಾಗತಿಸಿದರು.

ಇಂದು ಕನಕದಾಸ ಜಯಂತಿ ಇರುವುದರಿಂದ ವಿಧಾನಸೌಧದ ಬಳಿ ಇರುವ ಸಂತ ಕನಕದಾಸ ಮತ್ತು ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಕೆಎಸ್‌ಅರ್‌ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮತ್ತು ಭಾರತ್‌ ಗೌರವ್‌ ಕಾಶಿ ದರ್ಶನ್‌ ರೈಲುಗಳಿಗೆ ಚಾಲನೆ ನೀಡಿದರು.

ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್‌-2ರ ಉದ್ಘಾಟನೆ:

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮತ್ತು ಭಾರತ್‌ ಗೌರವ್‌ ಕಾಶಿ ದರ್ಶನ್‌ ರೈಲುಗಳಿಗೆ ಚಾಲನೆ ನೀಡಿದ ನಂತರ, ಮೇಖ್ರಿ ಸರ್ಕಲ್‌ ವೃತ್ತದ ಎಎಫ್‌ಟಿಟಿಸಿ ಹೆಲಿಪ್ಯಾಡ್‌ನಿಂದ ಹೆಲಿಕ್ಯಾಪ್ಟರ್‌ ಮೂಲಕ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದತ್ತ ತೆರಳಿದರು, ಅಲ್ಲಿ ಅವರು ವಿಮಾನ ನಿಲ್ದಾಣದ ಟರ್ಮಿನಲ್‌-2 ಅನ್ನು ಉದ್ಘಾಟಿಸಿದರು. ಬಳಿಕ ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು