Saturday, April 27, 2024

ಸತ್ಯ | ನ್ಯಾಯ |ಧರ್ಮ

ಕೋವಿಡ್ ಹಾಟ್‌ಸ್ಪಾಟ್ ಆಗುವತ್ತ ಬೆಂಗಳೂರು : 78 ರಲ್ಲಿ 68 ಪ್ರಕರಣ ರಾಜಧಾನಿಯಲ್ಲೇ ದಾಖಲು

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಶುಕ್ರವಾರ ದಿನದ ಅಂತ್ಯಕ್ಕೆ, 78 ಹೊಸ ಪ್ರಕರಣ ದಾಖಲಾದರೆ, ಕೋವಿಡ್ ಕಾರಣಕ್ಕೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 78 ಹೊಸ ಪ್ರಕರಣಗಳಲ್ಲಿ 68 ಪ್ರಕರಣ ಕೇವಲ ಬೆಂಗಳೂರಲ್ಲೇ ಪತ್ತೆಯಾಗಿದ್ದು ಈಗ ಸಿಲಿಕಾನ್ ಸಿಟಿ ಆತಂಕದಲ್ಲಿದೆ.

ಶುಕ್ರವಾರ ದಿನದ ಅಂತ್ಯಕ್ಕೆ ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ 176 ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಮೂಲದ ವ್ಯಕ್ತಿಯ ಸಾವು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, 162 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇದ್ದರೆ, 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 3.29 ಕ್ಕೆ ಏರಿಕೆಯಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ಕೋವಿಡ್ ನ ಹಾಟ್ ಸ್ಪಾಟ್ ಆಗಲಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಅದರಲ್ಲೂ ವಿಕ್ಟೋರಿಯಾ, ವಾಣಿ ವಿಲಾಸ, ಮಿಂಟೋ ಆಸ್ಪತ್ರೆಗಳಲ್ಲಿ ಹೆಚ್ಚು ಪ್ರಕರಣ ಕಂಡುಬಂದಿದ್ದು, ಆಸ್ಪತ್ರೆಯ ಒಪಿಡಿ ಬ್ಲಾಕ್​ಗಳಲ್ಲಿ ಟ್ರಯಾಜ್ ಸೆಂಟರ್ ನಿರ್ಮಾಣ ಮಾಡಲಾಗಿದೆ.

ಜ್ವರ, ಶೀತ ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಯಾವುದೇ ರೋಗ ಲಕ್ಷಣಗಳು ಕಂಡುಬಂದರೆ ಕಡ್ಡಾಯವಾಗಿ RT PCR ಪರೀಕ್ಷೆಗೆ ಆರೋಗ್ಯ ಇಲಾಖೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ನಿತ್ಯ ಆಸ್ಪತ್ರೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ. ಅದರಂತೆ ಶುಕ್ರವಾರ 200 ಜನರಿಗೆ ಟೆಸ್ಟ್ ಮಾಡಲಾಗಿದ್ದು, 10 ಜನರಿಗೆ ಪಾಸಿಟಿವ್​ ಕಂಡುಬಂದಿದೆ.

ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ
ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್​ ನಿರ್ವಹಣೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಿದೆ. ಅದರಲ್ಲಿ ಸಚಿವರಾದ ಹೆಚ್. ಸಿ.ಮಹದೇವಪ್ಪ, ಡಾ.ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಇದ್ದು, ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ತಜ್ಞರು, ಇಲಾಖೆಗಳ ಮುಖ್ಯಸ್ಥರೊಂದಿಗೆ ಪರಾಮರ್ಶಿಸಲಿದೆ.

Related Articles

ಇತ್ತೀಚಿನ ಸುದ್ದಿಗಳು