Monday, June 17, 2024

ಸತ್ಯ | ನ್ಯಾಯ |ಧರ್ಮ

ಬ್ಯಾಂಕ್‌ ಸಿಬ್ಬಂದಿಗಳು ಗ್ರಾಹಕರ ಜೊತೆ ಕನ್ನಡದಲ್ಲಿ ವ್ಯವಹರಿಸುವುದು ಕಡ್ಡಾಯ: ಸರ್ಕಾರದಿಂದ ಹೊಸ ಕಾನೂನು!

ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದಿಲ್ಲ ಎಂಬ ಗ್ರಾಹಕರ ಆರೋಪಕ್ಕೆ ಶೀಘ್ರದಲ್ಲೇ ತೆರೆ ಬೀಳುವ ಸಾಧ್ಯತೆ ಇದೆ. ಹೌದು, ಬ್ಯಾಂಕ್ ಸಿಬ್ಬಂದಿ ಇನ್ನು ಮುಂದೆ ಗ್ರಾಹಕರೊಂದಿಗೆ ಕನ್ನಡದಲ್ಲಿ ವ್ಯವಹರಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸ್ಥಳೀಯ ಭಾಷೆ ತಿಳಿದಿಲ್ಲದ ಬ್ಯಾಂಕ್ ಸಿಬ್ಬಂದಿಗಳಳೊಂದಿ ವ್ಯವಹರಿಲಾಗದೆ ಹಳ್ಳಿಯ ಜನರು ಸಮಸ್ಯೆ ಎದುರಿಸುತ್ತಿದ್ದು, ಬ್ಯಾಂಕ್‌ ಅಧಿಕಾರಿಗಳಿಗೆ ಕನ್ನಡ ಕಡ್ಡಾಯ ಮಾಡಬೇಕು ಎಂಬುದು ಅನೇಕ ಕನ್ನಡಪರ ಹಾಗೂ ಮುಖ್ಯವಾಗಿ ಗ್ರಾಹಕರ ಅಪೇಕ್ಷೆಯಾಗಿತ್ತು. ಈ ಬೇಡಿಕೆಗೆ ಮನ್ನಣೆ ನೀಡಲು ಹೊರಟಿರುವ ಸರ್ಕಾರ ಅಧಿಸೂಚನೆ ಹೊರಡಿಸಲು ಮುಂದಾಗಿದೆ. ಈ ಕುರಿತು ಇನ್ನೆರಡು ದಿನಗಳಲ್ಲಿ ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸುವ ನಿರೀಕ್ಷೆಯಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಂಗಲ್ ‘ಎಕನಾಮಿಕ್ ಟೈಮ್ಸ್’ಗೆ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳು, ಮಂಡಳಿಗಳು, ನಿಗಮಗಳು ಮತ್ತು ಶಾಸನಬದ್ಧ ಅಥವಾ ಶಾಸನಬದ್ಧವಲ್ಲದ ಸಂಸ್ಥೆಗಳಲ್ಲಿನ ಉದ್ಯೋಗಗಳಿಗೆ ಕನ್ನಡ ಭಾಷೆಯ ಜ್ಞಾನವು ಅತ್ಯಗತ್ಯ,” ಎಂದು ಸಾರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ- 2022ನ್ನು ಮಾರ್ಚ್ ನಲ್ಲಿ ಅಂಗೀಕರಿಸಲಾಗಿದ್ದು ಎಲ್ಲಾ ಸರ್ಕಾರಿ ಸಿಬ್ಬಂದಿಗಳ ಕನ್ಬಡ ಕಲಿಯುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

ಕನ್ನಡೇತರ ಬ್ಯಾಂಕ್‌ಗಳ ಸಿಬ್ಬಂದಿಗಳಿಗೆ ‘ಕನ್ನಡ ಕಲಿಕಾ ಘಟಕ’ ಸ್ಥಾಪಿಸಬೇಕು ಮತ್ತು ಸರ್ಕಾರವು ತಾನೇ ಅಗತ್ಯ ಬೋಧಕ ಸಿಬ್ಬಂದಿ ಮತ್ತು ಅಧ್ಯಯನ ಸಾಮಗ್ರಿಗಳನ್ನು ನೀಡುತ್ತದೆ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು