Monday, June 17, 2024

ಸತ್ಯ | ನ್ಯಾಯ |ಧರ್ಮ

ಬರದ ಹಿನ್ನೆಲೆ : ಬ್ಯಾಂಕ್ ಸಾಲ ವಸೂಲಾತಿಗೆ ರಾಜ್ಯ ಸರ್ಕಾರದಿಂದ ಬ್ರೇಕ್

ತೀವ್ರ ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರ ತುಸು ನೆಮ್ಮದಿಯ ವಾತಾವರಣ ಕಲ್ಪಿಸಿದೆ. ಅದರಂತೆ ಬ್ಯಾಂಕ್ ಸಾಲ, ಕೃಷಿ ಸಾಲ, ಕೃಷಿ ಅಭಿವೃದ್ಧಿ ಸಾಲಗಳ ವಸೂಲಾತಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.

ಸಧ್ಯಕ್ಕೆ ಬರದಿಂದ ಕಂಗಾಲಾದ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದ್ದು, ಬರಪೀಡಿತ ಪ್ರದೇಶ ಎಂದು ಘೋಷಿಸಿರುವ ಪ್ರದೇಶದಲ್ಲಿ ರೈತರ ಸಾಲ ವಸೂಲಿಗೆ ತಾತ್ಕಾಲಿಕ ತಡೆ ನೀಡಲಾಗಿದೆ.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಅರ್ಹ ರೈತರ ಸಾಲಗಳನ್ನು ಪುನರ್ ರಚಿಸುವಂತೆ ಬ್ಯಾಂಕರ್ ಗಳ ಸಮಿತಿ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ ಸರ್ಕಾರವಿದೆ, ರೈತರಿಗೆ ಯಾವುದೇ ಲಾಭವಿಲ್ಲ ಎಂದು ವಿಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರಿಗೆ ಅಗತ್ಯ ವಿದ್ಯುತ್ ಕೊಡಲು ಸಾಧ್ಯವಾಗುತ್ತಿಲ್ಲ. ಲೋಡ್ ಶೆಡ್ಡಿಂಗ್ ಈಗಲೇ ಶುರು ಮಾಡಿದೆ. ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದೆ ಎಂದು ಬಿಜೆಪಿ ಹಲವು ನಾಯಕರು ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದರು.

ಅಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಇದರ ಜೊತೆಗೆ ಬ್ಯಾಂಕುಗಳು ವಸೂಲಿಗೆ ಇಳಿದರೆ ರೈತರ ಸ್ಥಿತಿ ಕೂಡಾ ಹೀನಾಯ ಆಗುವ ಸಾಧ್ಯತೆ ಮನಗಂಡು ರಾಜ್ಯ ಸರ್ಕಾರ ಈ ರೀತಿಯ ಮಹತ್ವದ ಘೋಷಣೆ ಮಾಡಿದೆ‌.

Related Articles

ಇತ್ತೀಚಿನ ಸುದ್ದಿಗಳು