ಕನ್ನಡತಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ‘ಬೂಕರ್ ಪ್ರಶಸ್ತಿ’ ಲಭಿಸಿದೆ. ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದ್ದು, ಈ ಗರಿಮೆ ಮೂಡಿಸಿದ ಗರಿ ಬಾನು ಮುಷ್ತಾಕ್ ಅವರ ಹಾರ್ಟ್ ಲ್ಯಾಂಪ್ ಕೃತಿಗೆ ಸಲ್ಲುತ್ತದೆ.
ಲೇಖಕಿ ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.
ಮೇ 2024 ಮತ್ತು ಏಪ್ರಿಲ್ 2025 ರ ನಡುವೆ UK ಮತ್ತು ಐರ್ಲೆಂಡ್‌ನಲ್ಲಿ ಪ್ರಕಟವಾದ ಇಂಗ್ಲಿಷ್‌ಗೆ ಅನುವಾದಿಸಲಾದ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಬಾನು ಮುಷ್ತಾಕ್ ಅವರ ಹಾರ್ಟ್ ಲ್ಯಾಂಪ್ ಗೆ ಪ್ರತಿಷ್ಠಿತಿ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿ 57.34 ಲಕ್ಷ ನಗದು ಒಳಗೊಂಡಿದೆ.