ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಸಂಜೆಯ ವೇಳೆಗೆ ಸ್ವಲ್ಪ ಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಹಲವು ದಿನಗಳಿಂದ ಬಸವರಾಜ ಬೊಮ್ಮಾಯಿಯವರು ಮೊಣಕಾಲಿನ ತೀವ್ರ ನೋವಿನಿಂದ ಬಳಲುತ್ತಿದ್ದರು. ಚುನಾವಣಾ ಸಂದರ್ಭದಲ್ಲೂ ಸಹ ಎಡೆಬಿಡದ ಓಡಾಟದಿಂದ ಕಾಲುನೋವು ಕಾಣಿಸಿಕೊಂಡಿತ್ತು‌.

ಈಗ ವೈದ್ಯರ ಸಲಹೆಯ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು