Home ಬೆಂಗಳೂರು ಡಿಸೆಂಬರ್‌ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಡಿಸೆಂಬರ್‌ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

0

ಬೆಂಗಳೂರು: ʼಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಚುನಾವಣೆಯನ್ನು ಮುಂಬರುವ ಡಿಸೆಂಬರ್‌ ತಿಂಗಳ ಅಂತ್ಯದೊಳಗೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶಿದೆ.

‘ಬಿಬಿಎಂಪಿ ವಾರ್ಡ್‌ ವಾರು ಮೀಸಲು ನಿಗದಿಯಲ್ಲಿ ತಾರತಮ್ಯ ಎಸಗಲಾಗಿದೆʼ ಎಂದು ಆರೋಪಿಸಿ ಈಜಿಪುರದ ಕೆ.ಮಹದೇವ, ಕಮ್ಮನಹಳ್ಳಿಯ ಪಳನಿ ದಯಾಳನ್‌, ದೊಡ್ಡಬಾಣಸವಾಡಿಯ ವಿ.ಶ್ರೀನಿವಾಸ್‌ ಮತ್ತು ನಾಗನಾಥಪುರದ ಕೆ.ಚಂದ್ರಶೇಖರ್‌ ಸೇರಿದಂತೆ ಎಂಟು ಜನ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ ವಿಚಾರಣೆ ನಡೆಸಿ, 2022 ಡಿಸೆಂಬರ್‌ 31 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಆದೇಶಿಸಿದೆ.

ಬಿಬಿಎಂಪಿ ವಾರ್ಡ್ ಮೀಸಲಾತಿ ಕುರಿತು ನಗರಾಭಿವೃದ್ಧಿ ಇಲಾಖೆ (ಯುಡಿಡಿ) ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ (ಎಚ್‌ಸಿ) ಶುಕ್ರವಾರ ರದ್ದುಗೊಳಿಸಿದೆ ಮತ್ತು ನವೆಂಬರ್ 30 ರ ಮೊದಲು ಹೊಸ ಅಧಿಸೂಚನೆಯನ್ನು ಹೊರಡಿಸಲು ಆದೇಶಿಸಿದೆ.

You cannot copy content of this page

Exit mobile version