Saturday, November 30, 2024

ಸತ್ಯ | ನ್ಯಾಯ |ಧರ್ಮ

ಶಿಸ್ತು ಇಲ್ಲದೆ ಚುನಾವಣೆಯಲ್ಲಿ ಸೋತೆವು: ಖರ್ಗೆ ತೀವ್ರ ಅಸಮಾಧಾನ

ಹೊಸದಿಲ್ಲಿ, ನವೆಂಬರ್ 29: ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಇಲ್ಲದಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಶುಕ್ರವಾರ ದೆಹಲಿಯಲ್ಲಿ ನಡೆದ ಸಿಡಬ್ಲ್ಯೂ ಸಭೆಯಲ್ಲಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆಯಲ್ಲಿ ಉತ್ಸಾಹದಿಂದ ಕಾಂಗ್ರೆಸ್ ಪುನರಾಗಮನ ಮಾಡಿದೆ, ಆದರೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವು ಪಕ್ಷಕ್ಕೆ ನಿರಾಶೆ ತಂದಿದೆ ಎಂದು ಹೇಳಿದರು. ಪಕ್ಷವನ್ನು ಶುದ್ಧೀಕರಿಸಬೇಕು ಎಂದು ಹೇಳಿದ್ದಾರೆ. ಪಕ್ಷದಲ್ಲಿ ಒಗ್ಗಟ್ಟಿನ ಕೊರತೆ, ಪರಸ್ಪರ ಟೀಕೆಗಳು ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಿವೆ ಎಂದರು.

ಇವಿಎಂಗಳು ಚುನಾವಣಾ ಪ್ರಕ್ರಿಯೆಯನ್ನು ಅನುಮಾನಾಸ್ಪದವಾಗಿಸಿದೆ ಎಂದ ಅವರು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಕ್ರಮಕೈಗೊಳ್ಳುವಂತೆ ಕೇಳಿಕೊಂಡರು. ಪಕ್ಷವನ್ನು ಬಲಪಡಿಸಲು ತಳಮಟ್ಟದಿಂದ ಎಐಸಿಸಿ ಹಂತದವರೆಗೆ ಬದಲಾವಣೆ ತರಬೇಕು ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page