ಬೇಲೂರು : ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮಂತ್ರಾಲಯದ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 16 ವರ್ಷದ ಬಾಲಕಿ ತೇಜಸ್ವಿನಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತೇಜಸ್ವಿನಿ ಬೇಲೂರು ತಾಲ್ಲೂಕಿನ ಶೆಟ್ಟಿಗೆರೆ ಗ್ರಾಮದ ನಿವಾಸಿಯಾಗಿದ್ದು, ಲೋಲಾಕ್ಷಿ ಅವರ ಪುತ್ರಿಯಾಗಿದ್ದಾರೆ. ಈ ಘಟನೆಯಲ್ಲಿ ನಿನ್ನೆ ತೇಜಸ್ವಿನಿ ಅವರ ತಾಯಿ ಲೋಲಾಕ್ಷಿ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದರು. ಇʼದೀಗ ತೇಜಸ್ವಿನಿಯ ಸಾವಿನಿಂದಾಗಿ ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.ಈ ದಾರುಣ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
