Friday, June 14, 2024

ಸತ್ಯ | ನ್ಯಾಯ |ಧರ್ಮ

ಬೆಂಗಳೂರು ಹಾಗೂ ಕಾನೂನನ್ನು ಬಿಜೆಪಿ ಪಕ್ಷ ಗುತ್ತಿಗೆ ಪಡೆದಿದೆಯೇ? : ಕಾಂಗ್ರೆಸ್‌

ಬೆಂಗಳೂರು : ರಾಜ್ಯ ವಕೀಲ ಸಂಘದ ಅಧ್ಯಕರಾದ ವಿವೇಕ್‌ ಸುಬ್ಬಾರೆಡ್ಡಿ ದೀಪಾವಳಿ ಪ್ರಯುಕ್ತ ಶುಭಾಷಯಗಳನ್ನು ಕೋರಲು ಪ್ರೆಕ್ಸ್‌ಗಳು ಹಾಕಿಸಿದ್ದು, ಕಾಂಗ್ರೆಸ್ ಈ ವಿರುದ್ದ ಕಿಡಿಕಾರಿದೆ

ಬೆಂಗಳೂರಿನಲ್ಲಿ ಫ್ಲೆಕ್ಸ್‌, ಬ್ಯಾನರ್ ನಿಷೇಧಿಸಿದ್ದು, ಅನಧಿಕೃತವಾಗಿ ಫ್ಲೆಕ್ಸ್‌  ಬ್ಯಾನರ್‌ಗಳು ಅಳವಡಿಸಿದರೆ ಕಾನೂನಿನ ಪ್ರಕಾರ 6 ತಿಂಗಳು ಜೈಲು ಮತ್ತು ಒಂದು ಲಕ್ಷ ದಂಡ ಹಾಕಿ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಯವರಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ವರೆಗೂ  ಇದರ ವಿರುದ್ದ 26 ಎಫ್‌ಐಆರ್‌ ಗಳನ್ನು ದಾಖಲಿಸಲಾಗಿದೆ.

ಆದರೆ ಬಿಬಿಎಂಪಿ ಮತ್ತು ಹೈಕೋರ್ಟ್‌ ನಿರ್ದೇಶನಗಳನ್ನು ರಾಜಕೀಯ ವ್ಯಕ್ತಿಗಳು ಮಾತ್ರ ಆದೇಶನವನ್ನು ಉಲ್ಲಂಘನೆ ಮಾಡುತ್ತಲೇ ಬಂದಿದ್ದಾರೆ. ಇದೀಗ ರಾಜ್ಯ ವಕೀಲ ಸಂಘದ ಅಧ್ಯಕರಾದ ವಿವೇಕ್‌ ಸುಬ್ಬಾರೆಡ್ಡಿ ದೀಪಾವಳಿ ಪ್ರಯುಕ್ತ ಶುಭಾಷಯಗಳನ್ನು ಕೋರಲು ಪ್ರೆಕ್ಸ್‌ಗಳು ಹಾಕಿಸಿದ್ದು, ಕಾಂಗ್ರೆಸ್ ಈ ವಿರುದ್ದ ಕಿಡಿಕಾರಿದೆ.

ಈ ಹಿನ್ನಲೆಯಲ್ಲಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ʼಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್‌ಗಳಿಗೆ ನಿಷೇಧವಿದ್ದರೂ ಬೆಂಗಳೂರಿನಾದ್ಯಂತ 5000ಕ್ಕೂ ಹೆಚ್ಚು ಬಿಜೆಪಿ ಪಕ್ಷದ ಅನಧಿಕೃತ ಬ್ಯಾನರ್‌ಗಳನ್ನು ಹಾಕಲಾಗಿದೆ. ಬಿಬಿಎಂಪಿ, ಬೆಂಗಳೂರು ನಗರ ಪೊಲೀಸರು, ಇವರ ವಿರುದ್ಧ ಪ್ರಕರಣ ದಾಖಲಿಸಲಿಲ್ಲವೇಕೆ? ಬ್ಯಾನರ್‌ಗಳನ್ನು ತೆರವು ಮಾಡಲಿಲ್ಲ ಏಕೆ? ಕಾನೂನು ಬಿಜೆಪಿಗೇ ಬೇರೆ, ಇತರರಿಗೆ ಬೇರೆ ಇದೆಯೇ? ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತ ಪಡಿಸಿದೆ.

ಕಾನೂನು ರಾಜಕೀಯ ದ್ವೇಷಕ್ಕೆ ಬಳಸಿಕೊಳ್ಳಲು ಮಾತ್ರ ಇರುವುದೇ? ಕಾಂಗ್ರೆಸ್ ಬ್ಯಾನರ್‌ಗಳಿಗೆ ತಾವು ತೋರುವ ವೀರಾವೇಶ ನಿಮ್ಮ ಪಕ್ಷದವರ ಬ್ಯಾನರ್‌ಗಳಿಗೆ ತೋರುತ್ತಿಲ್ಲವೇಕೆ? ಬೆಂಗಳೂರನ್ನು ಹಾಗೂ ಕಾನೂನನ್ನು ಬಿಜೆಪಿ ಪಕ್ಷ ಗುತ್ತಿಗೆ ಪಡೆದಿದೆಯೇ? ಎಂದು ಸಿಎಂ ಬೊಮ್ಮಾಯಿಯವರಿಗೆ ಪ್ರಶ್ನೆ ಮಾಡಿ ಕಿಡಿಕಾರಿದೆ.

ಬಿಬಿಎಂಪಿಯವರೇ, ಕ್ರಮ ಕೈಗೊಂಡು ತಮ್ಮ ನಿಷ್ಪಕ್ಷಪಾತವನ್ನು ನಿರೂಪಿಸಿ ಎಂದು ಕಾಂಗ್ರೆಸ್‌  ಬಿಬಿಎಂಪಿಗೆ ಸವಾಲೆಸಗಿದೆ.

Related Articles

ಇತ್ತೀಚಿನ ಸುದ್ದಿಗಳು