Home ಬೆಂಗಳೂರು ಬೆಂಗಳೂರು ಕಂಬಳ: ನಾನು ಬರೋದಿಲ್ಲ ಎಂದ ಸಂಸದ ಬ್ರಿಜ್ ಭೂಷಣ್ ಸಿಂಗ್

ಬೆಂಗಳೂರು ಕಂಬಳ: ನಾನು ಬರೋದಿಲ್ಲ ಎಂದ ಸಂಸದ ಬ್ರಿಜ್ ಭೂಷಣ್ ಸಿಂಗ್

0

ಮಂಗಳೂರು, ನ.21: ಇದೇ ಮೊದಲ ಬಾರಿಗೆ ನಡೆಯಲಿರುವ ಕರಾವಳಿಯ ಪ್ರಸಿದ್ಧ ಕಂಬಳಕ್ಕೆ‌ (Bengaluru Kambala) ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದೆ. ಆದರೆ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ (Brij Bhushan Sharan Singh) ಅವರನ್ನು ಆಹ್ವಾನಿಸಲಾಗಿದ್ದು ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಕುಸ್ತಿ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಕರೆದಿರುವುದು ಎಷ್ಟು ಸರಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದವು. ಸದ್ಯ ಈಗ ತಾವು ಕಂಬಳಕ್ಕೆ ಅತಿಥಿಯಾಗಿ ಬರುವುದಿಲ್ಲ ಎಂದು ಬ್ರಿಜ್ ಭೂಷಣ್ ಪತ್ರ ಬರೆದು ತಿಳಿಸಿದ್ದಾರೆ.

ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರ ಅಧ್ಯಕ್ಷತೆಯ ಬೆಂಗಳೂರು ಕಂಬಳ ಸಮಿತಿಯ ನೇತೃತ್ವದಲ್ಲಿ ನಡೆಯುವ ಈ ಕಂಬಳಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಒಂದು ಕೋಟಿ ರೂ. ಧನ ಸಹಾಯ ಮಾಡಿತ್ತು. ಅದಾಗ್ಯೂ, ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಲೈಂಗಿಕ ಹಗರಣದ ಆರೋಪಿಯನ್ನು ಆಹ್ವಾನಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲೇ ಅಸಮಾಧಾನಕ್ಕೆ ಕಾರಣವಾಗಿತ್ತು.

ಈ ಕುರಿತು ಸ್ಪಷ್ಟನೆ ನೀಡಿರುವ ಶಾಸಕ ಅಶೋಕ್‌ ರೈ ಬ್ರಿಜ್‌ ಭೂಷಣ್‌ ಅವರು ಬರುವುದಿಲ್ಲವೆಂದಿದ್ದಾರೆ. ಅತಿಥಿಯಾಗಿ ಆಹ್ವಾನ ನೀಡಲು ಕುಸ್ತಿ ಅಸೋಸಿಯೇಷನ್ ಹಾಗೂ ಸಿದ್ದಿ ಜನಾಂಗ ಮನವಿ ಮಾಡಿತ್ತು. ಅವರ ಮನವಿಯ ಹಿನ್ನೆಲೆಯಲ್ಲಿ ಅವರಿಗೆ ಆಹ್ವಾನ ನೀಡಲಾಗಿತ್ತು. ಈಗ ಅವರು ಬರುವುದಿಲ್ಲ ಎಂದಿದ್ದಾರೆ. ಈಗಿನ ಆಹ್ವಾನ ಪತ್ರಿಕೆಯನ್ನು ಹಿಂಪಡೆದು ಹೊಸದಾಗಿ ಮುದ್ರಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ನಾಡೆಲ್ಲ ಬರದ ನಡುವೆ ಪರಿತಪಿಸುತ್ತಿರುವ ಹೊತ್ತಿನಲ್ಲ ಒಣ ಮಣ್ಣಿನ ಊರಿನಲ್ಲಿ ನೀರು ಪೋಲು ಮಾಡಿ ಕೆಸರು ಗದ್ದೆ ನಿರ್ಮಿಸುವ ಔಚಿತ್ಯದ ಕುರಿತಾಗಿಯೂ ಕೆಲವು ಪ್ರಜ್ಞಾವಂತರು ದನಿಯೆತ್ತಿದ್ದಾರೆ.

You cannot copy content of this page

Exit mobile version