Home ಬೆಂಗಳೂರು ಒಲಿಂಪಿಕ್, ಪ್ಯಾರಾಲಿಂಪಿಕ್ಸ್ ವಿಜೇತರಿಗೆ ಗ್ರೂಪ್ ‘ಎ’ ಸರ್ಕಾರಿ ಉದ್ಯೋಗದ ಭರವಸೆ: ಬಸವರಾಜ್ ಬೊಮ್ಮಾಯಿ

ಒಲಿಂಪಿಕ್, ಪ್ಯಾರಾಲಿಂಪಿಕ್ಸ್ ವಿಜೇತರಿಗೆ ಗ್ರೂಪ್ ‘ಎ’ ಸರ್ಕಾರಿ ಉದ್ಯೋಗದ ಭರವಸೆ: ಬಸವರಾಜ್ ಬೊಮ್ಮಾಯಿ

0

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಉದ್ಯೋಗಗಳಿಗೆ ಕ್ರೀಡಾಪಟುಗಳ ನೇರ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ ನೀಡಲಿದ್ದು, ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿಯನ್ನು ಮಾಡಲಾಗುತ್ತದೆ ಮತ್ತು ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ಸ್ ವಿಜೇತರಿಗೆ ‘ಎ’ ಗುಂಪಿನ ಉದ್ಯೋಗಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಏಕಲವ್ಯ ಮತ್ತು ಇತರ ಕ್ರೀಡಾ ಪ್ರಶಸ್ತಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಷ್ಯನ್ ಗೇಮ್ಸ್ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ‘ಬಿ’ ಗುಂಪಿನಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಇತರ ಕ್ರೀಡಾಕೂಟಗಳಲ್ಲಿ ಪದಕ ಪಡೆದವರಿಗೆ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಹುದ್ದೆಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಈ ವರ್ಷ ಆಗಸ್ಟ್ 15 ರಿಂದ ಸರ್ಕಾರವು 75 ಕ್ರೀಡಾಪಟುಗಳನ್ನು ದತ್ತು ತೆಗೆದುಕೊಂಡಿದೆ ಮತ್ತು ಮುಂದೆ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ತರಬೇತಿ ನೀಡಲಿದೆ. ಕ್ರೀಡಾಪಟುಗಳಿಗೆ ನಾಲ್ಕು ವರ್ಷಗಳ ಕಾಲ ಉತ್ತಮ ತರಬೇತುದಾರರಿಂದ ತರಬೇತಿ ನೀಡಲಾಗುತ್ತಿದ್ದು, ಅವರು ಕ್ರೀಡೆಯನ್ನು ಮುಂದುವರಿಸಲು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ, ಸರ್ಕಾರವು ಪ್ರತಿ ಕ್ರೀಡಾಪಟುವಿಗೆ 10 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಮತ್ತು ಅಗತ್ಯದ ಮೇಲೆ ಹೆಚ್ಚಿನ ಹಣವನ್ನು ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡೆಗಳ ಅಭಿವೃದ್ಧಿಗಾಗಿ ಯುವ ನೀತಿಯನ್ನು ತರಲಾಗುವುದು ಎಂದು ಹೇಳಿದ ಅವರು. ʼಗೃಹ ಇಲಾಖೆಯಲ್ಲಿ ಶೇ.2ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ, ಹೀಗಾಘಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನೀತಿಗಳನ್ನು ಜಾರಿಗೆ ತರುವ ಕ್ರಮಗಳಿಗೆ ಆದ್ಯತೆ ನೀಡಲಾಗುವುದುʼ ಎಂದು ಬೊಮ್ಮಾಯಿ ಹೇಳಿದರು.

You cannot copy content of this page

Exit mobile version