ಬೆಂಗಳೂರು: ನಗರದಲ್ಲಿ ಮಳೆಯಿಂದ ಆಗಿರುವ ಹಾನಿಗೆ ಪರಿಹಾರವಾಗಿ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಕೇಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರವಾಹ ಹಾನಿಯ ಅವಲೋಕನವನ್ನು ಕೈಗೊಳ್ಳಲು ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ʼಅಂತರ ಸಚಿವಾಲಯದ ಕೇಂದ್ರ ತಂಡದೊಂದಿಗೆ ʼ(IMCT- Inter-Ministerial Central Team) ಸಭೆ ನಡೆಸಿದ್ದು, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ಮೊದಲ ವಾರದ ಮೂರು ಹಂತದ ಮಳೆಯ ಸಮಯದಲ್ಲಿ ಉಂಟಾದ ಹಾನಿಯ ವಿವರಗಳನ್ನು ಹಂಚಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ ನಂತರ ಐಎಂಸಿಟಿಯೊಂದಿಗೆ ಮತ್ತೊಂದು ಸಭೆ ನಡೆಸಲಾಗುವುದು ಎಂದು ಹೇಳಿದರು.