ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಫ್ಲೈಓವರ್‌ ಮೂರು ತಿಂಗಳು ಬಂದ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ಸಂಚಾರ ಮಾರ್ಗಗಳಲ್ಲಿ ಒಂದಾದ ಕೆಆರ್ ಮಾರ್ಕೆಟ್ ಫ್ಲೈಓವರ್‌ನಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಮೂರು ತಿಂಗಳ ಕಾಲ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸಂಪೂರ್ಣವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ.

ಕೆಆರ್ ಮಾರ್ಕೆಟ್ ಫ್ಲೈಓವರ್‌ನಿಂದ ಚಾಮರಾಜಪೇಟೆ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಕಡ್ಡಾಯವಾಗಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

ರಸ್ತೆ ಬಲವರ್ಧನೆ ಹಾಗೂ ದೀರ್ಘಾವಧಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ. ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಈ ಫ್ಲೈಓವರ್ ಬಂದ್ ಆಗುವುದರಿಂದ ನಗರದ ಹಲವು ಭಾಗಗಳಲ್ಲಿ ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಕೆಆರ್ ಮಾರ್ಕೆಟ್, ಚಾಮರಾಜಪೇಟೆ, ಟೌನ್ ಹಾಲ್, ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ಭಾಗಗಳಿಗೆ ತೆರಳುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸಂಚಾರದ ಅಡಚಣೆಯನ್ನು ಕಡಿಮೆ ಮಾಡಲು ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ. ಮೈಸೂರು ರಸ್ತೆ, ಟೌನ್ ಹಾಲ್, ಚಾಮರಾಜಪೇಟೆ ಮತ್ತು ಮೆಜೆಸ್ಟಿಕ್ ಕಡೆಗೆ ತೆರಳುವವರು ಸಮೀಪದ ಪರ್ಯಾಯ ಸಂಪರ್ಕ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂದು ಸೂಚಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು