ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದಲ್ಲಿಯೇ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು, ಇಂದು ಹೊಸದುರ್ಗ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ (ಪಿಐಬಿ) ಅನುಮೋದನೆ ದೊರೆತಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಪಡೆಯಲು ಕೇಂದ್ರ ಜಲಶಕ್ತಿ ಸಚಿವರನ್ನು ಕೋರಲಾಗಿದೆ ಎಂದು ತಿಳಿಸಿದರು.
ಯೋಜನೆಗೆ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗೆ ಪ್ರಾರಂಭಿಸಲು ಹಣಕಾಸಿನ ನೆರವು ದೊರೆಯಲಿದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ, ಭದ್ರಾ ಮೇಲ್ದಂಡೆ ಯೋಜನೆ, ಇಡೀ ರಾಜ್ಯದಲ್ಲಿಯೇ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆ ಆಗಲಿದೆ ಎಂದರು.