Home ದೇಶ ಭಾರತ ಜೋಡೋ ಯಾತ್ರೆಯ ಎರಡನೇ ಮಜಲು ಯಾವಾಗಿನಿಂದ?

ಭಾರತ ಜೋಡೋ ಯಾತ್ರೆಯ ಎರಡನೇ ಮಜಲು ಯಾವಾಗಿನಿಂದ?

0

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತಕ್ಕೆ ಸಿದ್ಧರಾಗಿದ್ದಾರೆ. ಅಕ್ಟೋಬರ್ 2 ಗಾಂಧಿ ಜಯಂತಿಯಂದು ಎರಡನೇ ಹಂತದ ಯಾತ್ರೆ ಆರಂಭವಾಗಲಿದೆ.

ಈ ಪ್ರವಾಸವು ಗುಜರಾತ್‌ನ ಪೋರಬಂದರ್‌ನಿಂದ ಮೇಘಾಲಯದವರೆಗೆ ನಡೆಯುತ್ತದೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವು ಜನವರಿ 2024ರಲ್ಲಿ ಕೊನೆಗೊಳ್ಳಲಿದೆ. ಅಲ್ಲದೆ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.
2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಜತೆಗೆ ರಾಹುಲ್ ದೇಶಾದ್ಯಂತ ವ್ಯಾಪಕ ಪ್ರಚಾರ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮೊದಲ ಹಂತದ ಯಾತ್ರೆಯಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 4 ಸಾವಿರ ಕಿಲೋಮೀಟರ್ ಪಾದಯಾತ್ರೆ ನಡೆಸಿದರು. ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ 3,970 ಕಿಮೀ ಕ್ರಮಿಸಿದ್ದು, 130 ದಿನಗಳ ನಂತರ ಜನವರಿ 30 ರಂದು ಶ್ರೀನಗರದಲ್ಲಿ ಕೊನೆಗೊಂಡಿತು.
ಭಾರತ್ ಜೋಡೋ ಯಾತ್ರೆ ಮುಗಿದ ಕೇವಲ ಎರಡು ತಿಂಗಳ ನಂತರ, ರಾಹುಲ್ ಗಾಂಧಿ ಅವರು ‘ಮೋದಿ’ ಎಂಬ ಉಪನಾಮದ ಬಗ್ಗೆ ಕಾಮೆಂಟ್ ಮಾಡಿದ್ದಕ್ಕಾಗಿ ಮಾನನಷ್ಟ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಯಿತು ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದರು. ಇದರಿಂದಾಗಿ ಲೋಕಸಭೆ ಸಂಸದ ಸ್ಥಾನಕ್ಕೂ ಅನರ್ಹಗೊಂಡಿದ್ದರು. ಆದರೆ, ಕಳೆದ ವಾರ ಸುಪ್ರೀಂ ಕೋರ್ಟ್ ಅವರಿಗೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿದ್ದರಿಂದ ಅವರು ಮತ್ತೆ ಲೋಕಸಭೆ ಸಂಸದರಾಗಿದ್ದಾರೆ.

You cannot copy content of this page

Exit mobile version