ಕರ್ನಾಟಕದಲ್ಲಿ ಭಾರತ ಐಕ್ಯಾತಾ ಯಾತ್ರೆ: ರಾಹು ಸಂಬಂಧಿತ ಕಾರ್ಯಕ್ರಮಗಳಿಂದ ದೂರವಿರಿ ಎಂದ ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ಭಾರತ ಐಕ್ಯಾತಾ ಯಾತ್ರೆಗೆ ಚಾಲನೆ ದೊರಕ್ಕಿದ್ದು, ಕರ್ನಾಟಕ ಕಾಂಗ್ರೆಸ್‌ ಯಾತ್ರೆಗೆ ರಾವುಕಾಲ ಆರಂಭವಾಗಿದ್ದು, ರಾಹು ಸಂಬಂಧಿತ ಕಾರ್ಯಕ್ರಮಗಳಿಂದ ದೂರವಿರಿ ಎಂದು ಬಿಜೆಪಿ ಟೀಕಿಸಿದೆ.

ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ ಐಕ್ಯಾತಾ ಯಾತ್ರೆಯೂ ಕರ್ನಾಟಕವನ್ನು ಪ್ರವೇಶಿಸಿದ್ದು, ರಾಜ್ಯ ಕಾಂಗ್ರೆಸ್‌ ನಾಯಕರು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಇಂದು ರಾಜ್ಯದಲ್ಲಿ ರಾಹುಕಾಲ ಆರಂಭದ ಸಮಯ ಬೆಳಿಗ್ಗೆ 10.30. ಆದುದರಿಂದ ದಿನನಿತ್ಯದ ನೆಮ್ಮದಿ ಮತ್ತು ಶಾಂತಿಗಾಗಿ ರಾಹು ಸಂಬಂಧಿತವಾದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಜನಹಿತಕ್ಕಾಗಿ ಜಾರಿ ಎಂದು ಭಾರತ ಐಕ್ಯಾತಾ ಯಾತ್ರೆ ಕುರಿತು ಬಿಜೆಪಿ ವ್ಯಂಗ್ಯವಾಡಿದೆ.

Related Articles

ಇತ್ತೀಚಿನ ಸುದ್ದಿಗಳು