ಅರುಣಾಚಲ ಪ್ರದೇಶದ ನಿರ್ಜನ ಪ್ರದೇಶವೊಂದರಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತ ನಡೆದ ಸ್ಥಳದಲ್ಲಿ ಯಾವುದೇ ವಾಹನಗಳಿಗೆ ಸಂಚಾರ ಸಾಧ್ಯವಿಲ್ಲದ ಕಾರಣ, ಇನ್ನೊಂದು ಹೆಲಿಕಾಪ್ಟರ್ ಮೂಲಕ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥರು.
ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಸಿಂಗಿಂಗ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆಯ ಸುಧಾರಿತ ಹೆಲಿಕಾಪ್ಟರ್ ಪತನಗೊಂಡಿದೆ. ಸೇನೆಯ ಮುಖ್ಯ ಕಚೇರಿಯಿಂದ ಸುಮಾರು 25 ಕಿ. ಮೀ. ದೂರದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 10.40 ರ ಸುಮಾರಿಗೆ ಹೆಲಿಕಾಪ್ಟರ್ ಪತನಗೊಂಡ ಬಗ್ಗೆ ಸೇನಾಧಿಕಾರಿಗಳು ಖಚಿತಪಡಿಸಿದ್ದಾರೆ.
ಅಕ್ಟೋಬರ್ 5 ರಂದು ಭಾರತೀಯ ಸೇನೆಗೆ ಸೇರಿದ್ದ ಚೀತಾ ಹೆಲಿಕಾಪ್ಟರ್ ಪತನಗೊಂಡು ಸೇನೆಯ ಒಬ್ಬ ಪೈಲಟ್ ಮೃತರಾಗಿದ್ದರು. ಅರುಣಾಚಲ ಪ್ರದೇಶದ ಈ ದುರ್ಘಟನೆಯಲ್ಲಿ ಇಲ್ಲಿಯವರೆಗೆ ಸಾವು ನೋವಿನ ಬಗ್ಗೆ ಅಧಿಕೃತವಾಗಿ ಇನ್ನೂ ವರದಿಯಾಗಿಲ್ಲ.