Home ರಾಜ್ಯ ಉತ್ತರ ಕನ್ನಡ ಭಟ್ಕಳ | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ:‌ ಸಬ್‌ ಇನ್ಸ್‌ಪೆಕ್ಟರ್ ಬಂಧನ

ಭಟ್ಕಳ | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ:‌ ಸಬ್‌ ಇನ್ಸ್‌ಪೆಕ್ಟರ್ ಬಂಧನ

0

ಭಟ್ಕಳ (ಉತ್ತರ ಕನ್ನಡ ಜಿಲ್ಲೆ): ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಂಕಿ ಪೊಲೀಸ್ ಠಾಣೆಗೆ ಸೇರಿದ ಪೊಲೀಸ್ ಉಪನಿರೀಕ್ಷಕರೊಬ್ಬರನ್ನು ಭಟ್ಕಳ ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ.

ಆರೋಪಿ ಅಧಿಕಾರಿ ಅಭಿನಂದನ್ ಗೌಡ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ನಿವಾಸಿಯಾದ ಅಭಿನಂದನ್, ನಾಲ್ಕು ತಿಂಗಳ ಹಿಂದಷ್ಟೇ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ನೇಮಕಗೊಂಡಿದ್ದರು.

ಅವರನ್ನು ಭಟ್ಕಳ ಪಟ್ಟಣದಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಸಂಬಂಧಪಟ್ಟ ಸಬ್ ಇನ್ಸ್‌ಪೆಕ್ಟರ್ ಗ್ರಾಮೀಣ ಪ್ರದೇಶದ ಬಾಲಕಿಯೊಬ್ಬಳನ್ನು ಭಟ್ಕಳಕ್ಕೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಭಟ್ಕಳ ನಗರ ಪೊಲೀಸರಿಗೆ ದೂರು ಬಂದಿತ್ತು. ದೂರಿನ ಹಿನ್ನೆಲೆಯಲ್ಲಿ ಪಿಎಸ್‌ಐ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

You cannot copy content of this page

Exit mobile version