ಪಾಟ್ನಾ: ಬಿಜೆಪಿಯೊಂದಿಗಿನ ಮೈತ್ರಿ ಮುರಿದು ರಾಜಿನಾಮೆ ನೀಡಿದ್ದ ನಿತೀಶ್ ಕುಮಾರ್, ಹೊಸ ಮಿತ್ರಪಕ್ಷಗಳಾದ ಆರ್‌ಜೆಡಿ,ಕಾಂಗ್ರೆಸ್ ಮತ್ತು ಎಡಪಕ್ಷಗಳ ಬೆಂಬಲಗಳೊಂದಿಗೆ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವಿಕರಿಸಿದ್ದಾರೆ.
ನಿತೀಶ್ ಕುಮಾರ್ ಜೊತೆ ಬಿಹಾರದ ಹೊಸ ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಕೂಡ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರದಲ್ಲಿ 8ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಾಖಲೆ ನಿತೀಶ್ ಅವರದ್ದಾಗಿದೆ.