Thursday, September 11, 2025

ಸತ್ಯ | ನ್ಯಾಯ |ಧರ್ಮ

ದರ್ಶನ್ ಗೆ ಬಿಗ್ ರಿಲೀಫ್; ಜಾಮೀನು ಅವಧಿ ವಿಸ್ತರಣೆ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ಪಡೆದಿರುವಂತ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಮಧ್ಯಂತರ ಜಾಮೀನನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದಿಸಿದರೆ, ಎಸ್ ಪಿಪಿ ಪ್ರಸನ್ನ ಕುಮಾರ್ ಸರ್ಕಾರದ ಪರವಾಗಿ ಪ್ರಬಲ ವಾದವನ್ನು ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ ಕೋರ್ಟ್ ಆದೇಶ ನೀಡುವವರೆಗೂ ಮಧ್ಯಂತರ ಜಾಮೀನನ್ನು ವಿಸ್ತರಿಸಿ, ನಟ ದರ್ಶನ್ ಗೆ ಬಿಗ್ ರಿಲೀಫ್ ನೀಡಿದೆ.

ಡಿಸೆಂಬರ್.11ರವರೆದೆ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿತ್ತು. ಅಂದೇ ಸರ್ಜರಿ ಮಾಡುತ್ತಿರುವುದಾಗಿ ಹೈಕೋರ್ಟ್ ಗೆ ಅವರ ಪರ ವಕೀಲ ಸಿ.ವಿ ನಾಗೇಶ್ ಮಾಹಿತಿ ನೀಡಿದ್ದರು. ಈ ಬಳಿಕ ಮಧ್ಯಂತರ ಆದೇಶವನ್ನು ಮುಂದಿನ ಜಾಮೀನು ಆದೇಶದ ತೀರ್ಪು ನೀಡುವವರೆಗೂ ವಿಸ್ತರಿಸಿ ಆದೇಶಿಸಿದೆ.

ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಸಲಾಯಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page