Friday, June 14, 2024

ಸತ್ಯ | ನ್ಯಾಯ |ಧರ್ಮ

ಜಾತಿ ನಿಂದನೆ : ಬಿಗ್ ಬಾಸ್ ಸ್ಪರ್ಧಿ ತನಿಶಾ ವಿರುದ್ಧ FIR ದಾಖಲಿಸಿದ ಪೊಲೀಸರು

ಕನ್ನಡದ ಬಿಗ್ ಬಾಸ್ ಸೀಜನ್ 10 ಈ ಬಾರಿ ಒಂದಿಲ್ಲೊಂದು ವಿಚಾರದಲ್ಲಿ ಹೆಚ್ಚು ಸುದ್ದಿಯಾಗಿದೆ. ಇಲ್ಲಿಯವರೆಗೆ ಬಿಗ್ ಬಾಸ್ ಮನೆಯ ಒಳಗಿನ ಕೆಲವು ವಿಚಾರಕ್ಕೆ ಸುದ್ದಿಯಾದರೆ, ಈ ಬಾರಿ ಮನೆಯ ಹೊರಗೆ ಆದ ವಿವಾದಗಳಿಗೆ ಹೆಚ್ಚು ಸುದ್ದಿಯಾಗುತ್ತಿದೆ.

ಹುಲಿಯುಗುರು ಪ್ರಕರಣಕ್ಕೆ ವರ್ತೂರು ಸಂತೋಷ್ ಅರೆಸ್ಟ್ ಆದರೆ ಈಗ ಜಾತಿ ನಿಂದನೆಯ ಆರೋಪಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ತನಿಶಾ ವಿರುದ್ಧ FIR ದಾಖಲಾಗಿದೆ, ಹಾಗೂ ಪ್ರತಾಪ್ ಮೇಲೆ ಪ್ರಕರಣ ದಾಖಲಾಗಿ ವಿಚಾರಣೆ ಎದುರಿಸಿದ್ದಾರೆ. ಆ ಮೂಲಕ ಬಿಗ್ ಬಾಸ್​ ಮನೆಯ ಸ್ಪರ್ಧಿ ವಿರುದ್ಧ ದಾಖಲಾದ ಎರಡನೇ ಪ್ರಕರಣ ಇದಾಗಿದೆ.

ಇತ್ತೀಚಿನ ಸಂಚಿಕೆಯೊಂದರಲ್ಲಿ ನಟಿ ತನಿಷಾ ಹಾಗೂ ಡ್ರೋನ್​ ಪ್ರತಾಪ್ ನಡುವೆ ನಡೆದ ವಾಗ್ವಾದದಲ್ಲಿ ಬೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ (Atrocity), ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.

ಸಂಚಿಕೆಯೊಂದಲ್ಲಿ ತನಿಶಾ, ವಡ್ಡ ಎಂಬ ಪದ ಬಳಸುವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್​ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು ಎಂದು ಸಮುದಾಯದ ಮುಖ್ಯಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಈ ಹಿನ್ನೆಲೆಯಲ್ಲಿ ತನಿಶಾ ಈಗ ಪ್ರಕರಣ ಎದುರಿಸಬೇಕಾಗಿದೆ.

ಈಗಾಗಲೇ ಕುಂಬಳಗೋಡು ಪೊಲೀಸರು ಬಿಗ್ ಬಾಸ್ ಸೆಟ್ ಗೆ ಹೋಗಿ ಪ್ರತಾಪ್ ಹಾಗೂ ತನಿಶಾ ಅವರನ್ನು ವಿಚಾರದಲ್ಲಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ತನಿಶಾ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗೆಯೇ ರಿಯಾಲಿಟಿ ಶೋ ಸೆಟ್ ಕಡೆಯಿಂದ ತನಿಶಾ ಹಾಗೂ ಪ್ರತಾಪ್ ಅವರ ಧ್ವನಿ ಮುದ್ರಿಕೆಯನ್ನು ಪೊಲೀಸರು ಸಂಪಾದಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು