Home ಅಪರಾಧ ರೀಲ್ಸ್ ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಬಳಕೆ ; ಬಿಗ್ ಬಾಸ್ ಸ್ಪರ್ಧಿಗಳು ಪೊಲೀಸರ ವಶಕ್ಕೆ

ರೀಲ್ಸ್ ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಬಳಕೆ ; ಬಿಗ್ ಬಾಸ್ ಸ್ಪರ್ಧಿಗಳು ಪೊಲೀಸರ ವಶಕ್ಕೆ

0

ಇನ್ಸ್ಟಾಗ್ರಾಮ್ ರೀಲ್ಸ್ ಕಾರಣಕ್ಕೆ ಸಾರ್ವಜನಿಕವಾಗಿ ಶಸ್ತ್ರಾಸ್ತ್ರ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್ ಗೌಡನನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಸಮಯಕ್ಕೆ ಅವರಿಗೆ ಪೊಲೀಸರು ವಿಚಾರಣೆಗೆ ಬುಲಾವ್ ನೀಡಿದ್ದರು.

ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಅವರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಬಗ್ಗೆ ಅಕ್ರಮ ಶಸ್ತ್ರಾಸ್ತ್ರ ಬಳಕೆ ಕಾನೂನಿನ ಅಡಿಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪಿಎಸ್‌ಐ ಗೆ ದೂರು ನೀಡಲಾಗಿತ್ತು. ಸಧ್ಯ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ ಹಾಳು ಮಾಡುವ ರೀತಿ ದುರ್ವರ್ತನೆ ತೋರಿದ್ದರಿಂದ 18 ಸೆಕೆಂಡ್ ಗಳ ವಿಡಿಯೋ ಲಿಂಕ್ ಮೂಲಕ ದೂರು ದಾಖಲಾಗಿದೆ.

ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಶಸ್ತ್ರಸ್ತ್ರ ಕಾಯ್ದೆಯ ಅಡಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

You cannot copy content of this page

Exit mobile version