Friday, November 14, 2025

ಸತ್ಯ | ನ್ಯಾಯ |ಧರ್ಮ

ಇಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ; ಕುತೂಹಲದ ಘಟ್ಟದತ್ತ ಬಿಹಾರದ ಭವಿಷ್ಯ

ಬಿಹಾರ ವಿಧಾನಸಭೆಯ ಎರಡು ಹಂತದ ಚುನಾವಣೆಗಳು ಮುಕ್ತಾಗೊಂಡಿದ್ದು, ಇಂದು ಫಲಿತಾಂಶ ಹೊರಬೀಳಲಿದೆ. 243 ಸ್ಥಾನಗಳ ಎರಡು ಹಂತಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ 46 ಮತಗಟ್ಟೆಗಳಲ್ಲಿ ಪ್ರಾರಂಭವಾಗಲಿದೆ.

ನಿತೀಶ್ ಕುಮಾರ್ ಅಧಿಕಾರವನ್ನು ಉಳಿಸಿಕೊಳ್ಳುತ್ತಾರೋ ಅಥವಾ ತೇಜಸ್ವಿ ಯಾದವ್ ಬಿಹಾರದ ಚುಕ್ಕಾಣಿ ಹಿಡಿಯುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ. ಈ ನಡುವೆ ನಿತೀಶ್ ಕುಮಾರ್ ಒಂದೆಡೆ ವಿಜಯವನ್ನು ಘೋಷಿಸಿದ್ದರೆ, ಮತ್ತೊಂದೆಡೆ ತೇಜಸ್ವಿ ಯಾದವ್ ಕೂಡ ನವೆಂಬರ್ 18 ರಂದು ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿಕೊಂಡಿದ್ದಾರೆ.

243 ಸ್ಥಾನಗಳಲ್ಲಿ 122 ಸ್ಥಾನಗಳ ಬಹುಮತದ ಅಗತ್ಯವಿದೆ. ಮತ ಎಣಿಕೆಗಾಗಿ ಆಡಳಿತವು ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಮಾಡಿದೆ. ಚುನಾವಣಾ ಆಯೋಗವು ಸಹ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿದೆ.

ನವೆಂಬರ್ 6 ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ 18 ಜಿಲ್ಲೆಗಳ 121 ಸ್ಥಾನಗಳು ಮತ್ತು ನವೆಂಬರ್ 11 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ 20 ಜಿಲ್ಲೆಗಳ 122 ಸ್ಥಾನಗಳು ಸೇರಿವೆ. ರಾಜ್ಯದಲ್ಲಿ ಶೇ. 67.13 ರಷ್ಟು ಮತದಾನ ದಾಖಲಾಗಿದ್ದು, ಇದು 1951 ರ ನಂತರದ ಅತ್ಯಧಿಕ ಮತದಾನವಾಗಿದೆ.

ಮಹಿಳಾ ಮತದಾರರ ಸಂಖ್ಯೆ ಶೇ. 71.6 ರಷ್ಟಿದ್ದು, ಇದು ರಾಜ್ಯದಲ್ಲಿ ಇದುವರೆಗಿನ ಅತ್ಯಧಿಕ ಮತದಾನವಾಗಿದೆ. ಈ ಬಾರಿ ಬಿಹಾರದ 243 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ನಂತರ, ಮರು ಮತದಾನದ ಅಗತ್ಯವಿರಲಿಲ್ಲ. ಚುನಾವಣಾ ಆಯೋಗವು ಇದನ್ನು ಪಾರದರ್ಶಕ ಮತ್ತು ನ್ಯಾಯಯುತ ಚುನಾವಣೆಯ ಪುರಾವೆ ಎಂದು ಬಣ್ಣಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page