Home ದೇಶ ಬಿಹಾರ: ಕರಡು ಮತದಾರರ ಪಟ್ಟಿ ಪ್ರಕಟಿಸಿದ ಇಸಿಐ

ಬಿಹಾರ: ಕರಡು ಮತದಾರರ ಪಟ್ಟಿ ಪ್ರಕಟಿಸಿದ ಇಸಿಐ

0

ಪಟನಾ: ಭಾರತದ ಚುನಾವಣಾ ಆಯೋಗ (ಇಸಿಐ) ಶುಕ್ರವಾರ ಬಿಹಾರದಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಮತದಾರರು ಇಸಿಐ ವೆಬ್‌ಸೈಟ್‌ನಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಬಹುದು.

ಇಸಿಐ ಪಟ್ಟಿಯ ಪ್ರಕಾರ, ಜೂನ್‌ನಲ್ಲಿ ಎಸ್‌ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಾರಂಭವಾಗುವ ಮೊದಲು ಬಿಹಾರದಲ್ಲಿ 7.93 ಕೋಟಿ ನೋಂದಾಯಿತ ಮತದಾರರಿದ್ದರು. ಆದರೆ, ಇಂದು ಬಿಡುಗಡೆಯಾದ ಕರಡು ಪಟ್ಟಿಯಲ್ಲಿ ಎಷ್ಟು ಮತದಾರರಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಕರಡು ಪಟ್ಟಿ ಪ್ರಕಟಣೆಯ ಜೊತೆಗೆ, ‘ಆಕ್ಷೇಪಣೆಗಳು ಮತ್ತು ಕ್ಲೇಮ್’ ಪ್ರಕ್ರಿಯೆ ಕೂಡ ಆರಂಭವಾಗಿದೆ. ಇದು ಸೆಪ್ಟೆಂಬರ್ 1ರವರೆಗೆ ಮುಂದುವರಿಯಲಿದೆ. ಈ ಅವಧಿಯಲ್ಲಿ, ಕರಡು ಪಟ್ಟಿಯಿಂದ ತಮ್ಮ ಹೆಸರು ಅಕಾರಣವಾಗಿ ತಪ್ಪಿ ಹೋಗಿದ್ದಲ್ಲಿ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದು. ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ.

ವಿಧಾನಸಭೆ ಚುನಾವಣೆಗೂ ಮುನ್ನ ಬಿಹಾರದಲ್ಲಿ ಇಸಿಐ ಕೈಗೊಂಡ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ವಿರೋಧ ಪಕ್ಷಗಳು ಈಗಾಗಲೇ ಕಳವಳ ವ್ಯಕ್ತಪಡಿಸಿವೆ.

You cannot copy content of this page

Exit mobile version