Home ಬ್ರೇಕಿಂಗ್ ಸುದ್ದಿ ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆ ವಿವಾದ – ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್...

ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆ ವಿವಾದ – ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ

ಪಾಟ್ನಾ: ಬಿಹಾರದಲ್ಲಿ ನೇಮಕಾತಿ ಮತ್ತು ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮಂಗಳವಾರ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿವಾಸದತ್ತ ಮುನ್ನುಗುತ್ತಿದ್ದಾಗ ಪೊಲೀಸ್ ಬ್ಯಾರಿಕೇಡ್ ಗಳನ್ನು ಮುರಿದಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ವಾಟರ್ ಕ್ಯಾನನ್‌ಗಳನ್ನು ಬಳಸಿದ್ದಾರೆ. ಇದರಿಂದಾಗಿ ಕೆಲವರು ಜಲಧಾರೆಯಲ್ಲೇ ಕುಣಿದಾಡಲು (Rain dance)ಪ್ರಾರಂಭಿಸಿದ್ದಾರೆ.

ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ (BPSC) ಉದ್ಯೋಗಾಕಾಂಕ್ಷಿಗಳು ಮತ್ತು ಇತರ ವಿದ್ಯಾರ್ಥಿಗಳು ಪಾಟ್ನಾದ ಗಾಂಧಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಡಾಕ್ ಬಂಗಲೆ ವೃತ್ತವನ್ನು ತಲುಪಿದಾಗ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಬಂದಿದ್ದ ಹಲವು ಪ್ರತಿಭಟನಾಕಾರರು, ಬ್ಯಾರಿಕೇಡ್ ಮುರಿಯುವ ಮುನ್ನ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಳಿಕ ಪೊಲೀಸರು ವಾಟರ್ ಕ್ಯಾನನ್‌ಗಳನ್ನು ಬಳಸಿದ್ದು, ಪ್ರತಿಭಟನಾಕಾರರು ಹಿಂದೆ ಸರಿಯುವ ಬದಲು ನೀರಿನಲ್ಲೇ ಕುಣಿಯಲು ಆರಂಭಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ಡಾಕ್ ಬಂಗಲೆ ವೃತ್ತದಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಮತ್ತು Rapid ಆಕ್ಷನ್ ಫೋರ್ಸ್ (RAF) ಸಿಬ್ಬಂದಿ ಸೇರಿದಂತೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಪಾಟ್ನಾದ ಗರ್ದಾನಿಬಾಗ್ ಪ್ರದೇಶದಲ್ಲಿ ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

You cannot copy content of this page

Exit mobile version