Monday, February 16, 2026

ಸತ್ಯ | ನ್ಯಾಯ |ಧರ್ಮ

ಬಿಕ್ಲು ಶಿವ ಕೊಲೆ ಕೇಸ್ – ಶಾಸಕ ಬೈರತಿ ನ್ಯಾಯಾಧೀಶರೆದುರು ಹಾಜರು

ಬೆಂಗಳೂರು : ಬಿಕ್ಲು ಶಿವನ ಮರ್ಡರ್ (Biklu Shiva Case) ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬೈರತಿ ಬಸವರಾಜ್ ರನ್ನು (Bairati Basavaraj) ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದು, ಇಂದು ನ್ಯಾಯಾದೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ.

ನ್ಯಾಯಾಲಯದ ಆದೇಶದಂತೆ, ಡಾ. ದಿನೇಶ್ ನೇತೃತ್ವದ ತಂಡ ಶನಿವಾರ ಬಸವರಾಜ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಟ್ಟಿದೆ. ಈ ಸಂದರ್ಭದಲ್ಲಿ ಇಸಿಜಿ, ಆಂಜಿಯೋಗ್ರಾಮ್ ಸೇರಿದಂತೆ ಹೃದಯಕ್ಕೆ ಸಂಬಂಧಿಸಿದ ಹಲವು ಪರೀಕ್ಷೆಗಳು ನಡೆಸಲಾಯಿತು ಮತ್ತು ರಕ್ತ ಮಾದರಿಯನ್ನು ಸಂಗ್ರಹಿಸಲಾಗಿದೆ.

ಸಿಐಡಿ ಮೂಲಗಳ ಮಾಹಿತಿ ಪ್ರಕಾರ, ಬಸವರಾಜ ಅವರು ಈಗಾಗಲೇ ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಪ್ರತಿ ನಾಲ್ಕು ಗಂಟೆಗೆ ವರದಿ ಮಾಡುತ್ತಿದ್ದಾರೆ. ಪ್ರಸ್ತುತ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯಕೀಯ ವರದಿ ಸಿದ್ಧವಾದ ಹಿನ್ನಲೆ ಇಂದು ಬಸವರಾಜ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ

ಸಿಐಡಿ ಅಧಿಕಾರಿಗಳು ಗುರುವಾರ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬೈರತಿ ಬಸವರಾಜ ಅವರನ್ನು ವಶಕ್ಕೆ ಪಡೆದಿದ್ದರು. ಶುಕ್ರವಾರ ಮಧ್ಯಾಹ್ನ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಸಂಪೂರ್ಣ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ತಕ್ಷಣ ಅವರ ವಶಕ್ಕೆ ನೀಡುವಂತೆ ಮನವಿ ಮಾಡಲಾಯಿತು. ವೈದ್ಯಕೀಯ ವರದಿ‌ನಲ್ಲಿ ಬೈರತಿ ಬಸವರಾಜಗೆ ಹೃದಯ ಸಂಬಂಧಿ ಸಮಸ್ಯೆಗಳು ಇರುವುದನ್ನು ವಿವರಿಸಲಾಗಿದೆ ಎಂದು ಗಮನಿಸಲಾಯಿತು.

ಹೃದಯ ಸಂಬಂಧಿ ಸಮಸ್ಯೆಗಳಿರುವುದರಿಂದ, ಪ್ರಕರಣದ ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಸೂಚನೆಯಂತೆ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಜೆಸಿಜೆಎಂ) ಅವರು ಬಸವರಾಜರನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page