ಬಿಲ್ಕಿಸ್‌ ಬಾನೊ ಪ್ರಕರಣ: ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ಗೆ

ನವದೆಹಲಿ: 2002 ರ ಗುಜರಾತ್‌ ಗಲಭೆಯಲ್ಲಿ ಬಿಲ್ಕಿಸ್‌ ಬಾನೊಗೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬದ 14 ಮಂದಿಯನ್ನು ಕೊಂದ ಆರೋಪದ ಮೇಲೆ 11 ಅಪರಾಧಿಗಳನ್ನು ಬಂಧಿಸಲಾಗಿತ್ತು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿರುವ ವಿರುದ್ಧ ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಗುಜರಾತ್‌ನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವು ಇತ್ತೀಚಿಗೆ ಎಲ್ಲಾ 11 ಅಪರಾಧಿಗಳಿಗೆ ಕ್ಷಮೆಯನ್ನು ನೀಡಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು