Saturday, March 15, 2025

ಸತ್ಯ | ನ್ಯಾಯ |ಧರ್ಮ

ರಾಜ್ಯಕ್ಕೂ ಕಾಲಿಟ್ಟ ಹಕ್ಕಿಜ್ವರ; ಚಿಕ್ಕಬಳ್ಳಾಪುರದಲ್ಲಿ 36 ಕೋಳಿಗಳ ಸಾವು

ಚಿಕ್ಕಬಳ್ಳಾಪುರದಲ್ಲಿ 36 ಕೋಳಿಗಳು ರಾತ್ರಿ ಬೆಳಗಾಗುವಷ್ಟರಲ್ಲಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ ನಂತರ ಸಾವಿಗೆ ಹಕ್ಕಿಜ್ವರ ಕಾರಣ ಎಂಬುದು ದೃಢಪಟ್ಟಿದೆ. ಈ ಮೂಲಕ ರಾಜ್ಯಕ್ಕೆ ಹಕ್ಕಿಜ್ವರದ ಮೊದಲ ಪ್ರಕರಣ ಇದಾಗಿದೆ.

ರಾಯಚೂರಿನ ಮಾನ್ವಿಯಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಹಕ್ಕಿಜ್ವರದ ಶಂಕೆ ವ್ಯಕ್ತವಾಗಿತ್ತು. ಈಗ ಚಿಕ್ಕಬಳ್ಳಾಪುರದಲ್ಲಿ ಕಂಡುಬಂದ ಪ್ರಕರಣದ ಹಿನ್ನೆಲೆಯಲ್ಲಿ ಹಕ್ಕಿಜ್ವರ ಬಂದಿರುವುದು ಖಾತ್ರಿಯಾಗಿದೆ.

ಜಿಲ್ಲೆಯ ವರದಹಳ್ಳಿಯ ದ್ಯಾವಪ್ಪ ಹಾಗೂ ರತ್ನಮ್ಮ ಎಂಬುವವರ ಮನೆಯಲ್ಲಿ 36 ಕೋಳಿಗಳು ರಾತ್ರಿ ಬೆಳಗಾವುವಷ್ಟರಲ್ಲಿ ಮೃತಪಟ್ಟಿದ್ದವು. ವಿಷ ಆಹಾರ ಸೇವನೆಯಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಪಶುಸಂಗೋಪನಾ ಇಲಾಖೆ ಕೋಳಿಗಳ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿತ್ತು. ಇದೀಗ ಲ್ಯಾಬ್ ವರದಿ ಜಿಲ್ಲಾಡಳಿತ ಹಾಗೂ ಪಶುಸಂಗೋಪನಾ ಇಲಾಖೆ ಕೈ ಸೇರಿದೆ.

ಹಕ್ಕಿಜ್ವರದಿಂದಲೇ ಕೋಳಿಗಳು ಮೃತಪಟ್ಟಿವೆ ಎಂಬುದು ದೃಢವಾಗಿದೆ. ವರದಹಳ್ಳಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಾದ್ಯಂತ ಔಷಧಿ ಸಂಪಡಿಸಲಾಗಿದೆ. ಕೋಳಿ ಸಾಕಿರುವವರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರಿನ ಮಾನ್ವಿ ಸೇರಿದಂತೆ ಹಲವು ಕಡೆ ಹಕ್ಕಿಗಳು ಸಾವನ್ನಪ್ಪುತ್ತಿದೆ. ಕಾಗೆ, ಪಾರಿವಾಳ ಸೇರಿದಂತೆ ಹಲವು ಪಕ್ಷಿಗಳು ಸಾವನ್ನಪ್ಪುತ್ತಿದೆ.ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ರಾಯಚೂರಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ

Related Articles

ಇತ್ತೀಚಿನ ಸುದ್ದಿಗಳು

You cannot copy content of this page