ಬೆಂಗಳೂರು: ಇಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖವಾಡ ಧರಿಸಿ ಬಿಜೆಪಿ ಕಾರ್ಯಕರ್ತರು ಪುರುಷ ಬಸ್ ಪ್ರಯಾಣಿಕರಿಗೆ ಗುಲಾಬಿ ಹಂಚಿ ಟಿಕೆಟ್ ದರ ಏರಿಕೆ ಮಾಡಿದ್ದಕ್ಕೆ ಕ್ಷಮೆ ಯಾಚಿಸಿದರು.
ಆರ್ ಅಶೋಕ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಮೇಲ್ಮನೆಯಲ್ಲಿನ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಮತ್ತು ಪಕ್ಷದ ಇತರ ಮುಖಂಡರೊಂದಿಗೆ ಪ್ರತಿಭಟನೆ ನಡೆಸಿದರು.
ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಮುಖವಾಡ ಧರಿಸಿ ಜನರ ಕಾಲಿಗೆ ಬಿದ್ದು ‘ಸಿಎಂ ಮತ್ತು ಉಪ ಮುಖ್ಯಮಂತ್ರಿ ಪರವಾಗಿ ಕ್ಷಮೆಯಾಚಿಸಿದರು’.
‘ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳಿಗೆ ದ್ರೋಹ ಬಗೆದಿದ್ದಕ್ಕೆ ಸಿದ್ದರಾಮಯ್ಯ ಅವರ ಪರವಾಗಿ ಕ್ಷಮೆ ಯಾಚಿಸಲು ಇಲ್ಲಿಗೆ ಬಂದಿದ್ದೇನೆ’ ಎಂದು ಅಶೋಕ ಪ್ರಯಾಣಿಕರಿಗೆ ತಿಳಿಸಿದರು.