Wednesday, October 30, 2024

ಸತ್ಯ | ನ್ಯಾಯ |ಧರ್ಮ

ಚುನಾವಣೆಗಾಗಿ ಬಿಜೆಪಿಯವರು ವಿವಾದದ ಸೃಷ್ಟಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 30: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ವಿಧಾನಸೌಧದಲ್ಲಿ ಈ ಪ್ರತಿಕ್ರಿಯೆ ನೀಡಿದರು

ರೈತರ ಜಮೀನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯವರು ಧ್ವನಿ ಎತ್ತುತ್ತಿರುವ ಬಗ್ಗೆ ಉತ್ತರಿಸಿ, ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ನೋಟಿಸ್ ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page